ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಇನ್ನು 9 ತಿಂಗಳು ಮಾತ್ರವೇ ಆಯಸ್ಸು , ಬಳಿಕ ಜೆಡಿಎಸ್ ಸರ್ಕಾರ ಅಸ್ಥಿತ್ವಕ್ಕೆ : ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ -Vishwnaews24
ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಕಂಡು, ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ..
ಮೈಸೂರು: ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಇನ್ನು 9 ತಿಂಗಳು ಮಾತ್ರವೇ ಆಯಸ್ಸು. ಈ ಬಳಿಕ ಜೆಡಿಎಸ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬರಲಿದೆ ಎಂಬುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ 9 ತಿಂಗಳ ಬಳಿಕ ವಿಧಾನಸಭಾ ಚುನಾವಣೆ ಘೋಷಣೆಯಾಗಲಿದೆ. ಬಿಜೆಪಿ ನೇತೃತ್ವದ ಸರ್ಕಾರ ಆಡಳಿತ ಮುಕ್ತಾಯವಾಗಲಿದೆ. ಮುಂಬರುವಂತ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಕಂಡು, ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ ಎಂಬುದಾಗಿ ಹೇಳಿದರು.
ಪರಿಷತ್ ಟಿಕೆಟ್ ಚುನಾವಣೆ ಬಗ್ಗೆ ಮಾತನಾಡಿದ ಅವರು, ಪರಿಷತ್ ಟಿಕೆಟ್ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಮಾಜಿ ಪ್ರಧಾನಿ ದೇವೇಗೌಡರು, ಕುಮಾರಸ್ವಾಮಿ, ನಾನು ಚರ್ಚಿಸಿಯೇ ಟಿಎ ಶರವಣ ಆಯ್ಕೆ ಮಾಡಿ, ಟಿಕೆಟ್ ಕೊಟ್ಟಿದ್ದೇವೆ. ನಾನು ಪರಿಷತ್ ಟಿಕೆಟ್ ಆಕಾಂಕ್ಷಿಯಲ್ಲ ಎಂಬುದಾಗಿ ಹೇಳಿದರು.
ನಾನೇನೂ ತಪ್ಪು ಮಾಡಿಲ್ಲ ಎನ್ನುವುದು ರಾಜ್ಯಕ್ಕೆ, ದೇಶಕ್ಕೆ ಗೊತ್ತಿದೆ : ಡಿಕೆ ಶಿವಕುಮಾರ್ – Vishwanews24
