ರಾಜ್ಯ ಬಿಜೆಪಿ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು : ಸಿದ್ದರಾಮಯ್ಯ -Vishwanews24
ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರ ಆಪರೇಷನ್ ಕಮಲ’ದ ಅನೈತಿಕ ಶಿಶುವಾಗಿದ್ದು ಈ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಹಣ, ಆಮಿಷ, ಒತ್ತಡ ತಂತ್ರದಿಂದ ಶಾಸಕರನ್ನು ಖರೀದಿಸಿ, ವಾಮಮಾರ್ಗದ ಮೂಲಕ ಬಿಜೆಪಿ ಅಧಿಕಾರ ಹಿಡಿದಿದೆ. ಈ ಸರ್ಕಾರಕ್ಕೆ ಸ್ಪಷ್ಟ ಜನಾದೇಶ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
ನಾವೀಗ ಅಧಿಕೃತವಾಗಿ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ನಮ್ಮ ವಿರೋಧ ಕೋಮುವಾದಿ ಬಿಜೆಪಿಯೇ ಹೊರತು ಜೆಡಿಎಸ್ ವಿರುದ್ಧ ಅಲ್ಲ ಎಂದರು.
ರಾಜ್ಯ ಬಿಜೆಪಿ ಸರಕಾರ ಆಪರೇಷನ್ ಕಮಲದ ಅನೈತಿಕ ಕೂಸು. ಹಣ, ಆಮಿಷ, ಒತ್ತಡ ತಂತ್ರ ಉಪಯೋಗಿಸಿ ಶಾಸಕರನ್ನು ಕೊಂಡು, ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿರುವ ಯಡಿಯೂರಪ್ಪನವರ ಸರಕಾರಕ್ಕೆ ಸ್ಪಷ್ಟ ಜನಾದೇಶವಿಲ್ಲ ಎಂದು ಟ್ವೀಟ್ ನಲ್ಲಿ ಆರೋಪಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ 'ಆಪರೇಷನ್ ಕಮಲದ ಅನೈತಿಕ ಕೂಸು'.
ಹಣ, ಆಮಿಷ, ಒತ್ತಡ ತಂತ್ರ ಉಪಯೋಗಿಸಿ ಶಾಸಕರನ್ನು ಕೊಂಡು, ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿರುವ ಯಡಿಯೂರಪ್ಪನವರ ಸರ್ಕಾರಕ್ಕೆ ಸ್ಪಷ್ಟ ಜನಾದೇಶವಿಲ್ಲ. ಈ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು.— Siddaramaiah (@siddaramaiah) August 28, 2019
ನಾವ್ಯಾರೂ ಜೆಡಿಎಸ್‌ನವರ ಮೇಲೆ ಹಗೆ ಸಾಧಿಸುತ್ತಿಲ್ಲ. ನಮಗೆ ಕೋಮುವಾದಿ ಶಕ್ತಿ ವಿರೋಧಿಯೇ ಹೊರತು, ಇನ್ನೊಂದು ಜಾತ್ಯತೀತ ಶಕ್ತಿಯಲ್ಲ’ ಎಂದು ಸಿದ್ಧರಾಮಯ್ಯ ಹೇಳಿದರು.
