ರಾಜ್ಯ ರಾಜಕೀಯದಲ್ಲಿ ನಡೆದಿರುವ ಎಲ್ಲ ಬೆಳವಣಿಗೆಗಳಿಗೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮತ್ತು ಎಚ್‌ಡಿ ರೇವಣ್ಣ ಅವರೇ ಕಾರಣ : ಎಂಟಿಬಿ ನಾಗರಾಜ್‌ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರುರಾಜ್ಯ ರಾಜಕೀಯದಲ್ಲಿ ನಡೆದಿರುವ ಎಲ್ಲ ಬೆಳವಣಿಗೆಗಳಿಗೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮತ್ತು ಎಚ್‌ಡಿ ರೇವಣ್ಣ ಅವರೇ ಕಾರಣ ಎಂದು ವಸತಿ ಸಚಿವ ಎಂಟಿಬಿ ನಾಗರಾಜ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಮತ್ತು ಲೋಕೋಪಯೋಗಿ ಸಚಿವರು ಮೈತ್ರಿ ಧರ್ಮ ಪಾಲನೆ ಮಾಡುತ್ತಿಲ್ಲ ಎಂದು ದೂರಿದರು.

ಶಾಸಕರ ಅನುದಾನಗಳನ್ನೇ ಬಿಡುಗಡೆ ಮಾಡುತ್ತಿಲ್ಲ. ಜೆಡಿಎಸ್‌ ಶಾಸಕರಿಗೆ ಮಾತ್ರ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಎಚ್‌ಡಿ ರೇವಣ್ಣ ಎಲ್ಲ ಇಲಾಖೆಗಳಲ್ಲೂ ಮೂಗು ತೂರಿಸುತ್ತಿದ್ದಾರೆ.  ಕುಮಾರಸ್ವಾಮಿ ಆಡಳಿತದಿಂದ ಬೇಸತ್ತು ಅತೃಪ್ತರು ಹೋಗಿರೋದು. ಎಂದು ಆರೋಪಿಸಿದರು.

ಇದೆಲ್ಲ ಬೆಳವಣಿಗೆಗಳಿಂದ ಬೇಸತ್ತು ನಮ್ಮ ಸ್ನೇಹಿತರು ರಾಜೀನಾಮೆ ನೀಡಿ ಮುಂಬಯಿಯಲ್ಲಿ ಬೀಡು ಬಿಟ್ಟಿದ್ದಾರೆ. ಸರಕಾರದಲ್ಲಿರುವ ಪ್ರಮುಖರ ಕಾರಣದಿಂದ ಕಾಂಗ್ರೆಸ್‌ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ನೇರವಾಗಿ ಜೆಡಿಎಸ್‌ನಿಂದಲೇ ಎಲ್ಲವೂ ಆಗುತ್ತಿದೆ ಎಂದು ಎಂಟಿಬಿ ನಾಗರಾಜ್‌ ತಿಳಿಸಿದರು.

ಜೆಡಿಎಸ್‌ನ ಸರ್ವಾಧಿಕಾರ ಧೋರಣೆಯೇ ಎಲ್ಲ ರಾಜಕೀಯ ಬೆಳವಣಿಗೆಗಳಿಗೆ ಕಾರಣ ಎಂದು ಎಂಟಿಬಿ ನಾಗರಾಜ್‌ ಪುನರುಚ್ಚರಿಸಿದರು.