ರಾಜ್ಯದ ನೂತನ ಲೋಕಾಯುಕ್ತರಾಗಿ ಬಿ.ಎಸ್.ಪಾಟೀಲ್ ಅಧಿಕಾರ ಸ್ವೀಕಾರ – Vishwnaews24
ರಾಜ್ಯದ ನೂತನ ಲೋಕಾಯುಕ್ತರಾಗಿ ಬಿ.ಎಸ್.ಪಾಟೀಲ್ ಅಧಿಕಾರ ಸ್ವೀಕಾರ
ಬೆಂಗಳೂರು : ರಾಜ್ಯದ ನೂತನ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಇಂದು ಅಧಿಕಾರ ಸ್ವೀಕರಿಸಿದರು.
ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಲೋಕಾಯುಕ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರಿಗೆ ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ಅಧಿಕಾರ ಗೌಪ್ಯತೆ ಬೋಧಿಸಿದರು. ದೇವರ ಹೆಸರಿನಲ್ಲಿ ನೂತನ ಲೋಕಾಯುಕ್ತ ನ್ಯಾಯಮೂರ್ತಿಗಳು ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಲೋಕಾಯುಕ್ತ ನ್ಯಾಯಮೂರ್ತಿಯಾಗಿದ್ದ ಪಿ.ವಿಶ್ವನಾಥ್ ಶೆಟ್ಟಿ ಅವರು ಸೇವೆಯಿಂದ ನಿವೃತ್ತರಾಗಿದ್ದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಹಾಲಿ ಉಪಲೋಕಾಯುಕ್ತರಾಗಿರುವ ಬಿ.ಎಸ್.ಪಾಟೀಲ್ ಅವರನ್ನು ಲೋಕಾಯುಕ್ತ ನ್ಯಾಯಮೂರ್ತಿಯನ್ನಾಗಿ ನೇಮಿಸಿ ಸರ್ಕಾರ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿತ್ತು.
