ರಾಜ್ಯದ ನೆರೆ ಸಂತ್ರಸ್ತರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ₹ 50 ಲಕ್ಷ ಪರಿಹಾರ : ಡಾ.ಎಂ. ಮೋಹನ ಆಳ್ವ -Vishwanews24

Featured, ದಕ್ಷಿಣ ಕನ್ನಡ

ಮೂಡುಬಿದಿರೆ: ರಾಜ್ಯದ ನೆರೆ ಸಂತ್ರಸ್ತರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ₹ 50 ಲಕ್ಷ ಪರಿಹಾರ ನೀಡುವುದಾಗಿ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಸೋಮವಾರ ಇಲ್ಲಿ ಪ್ರಕಟಿಸಿದರು.

2019-20 ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಇತರ ಸಾಮಾಜಿಕ ಚಟುವಟಿಕೆಗಳಿಗೆ ₹33.85 ಕೋಟಿಯ ವಿವಿಧ ‘ಕೊಡುಗೆ’ಗಳ ವಿವಿರವನ್ನು ನೀಡಿ ಅವರು ಮಾತನಾಡಿದರು.

ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿ, ‘ವಿದ್ಯಾರ್ಥಿಗಳನ್ನು ಸಮಾಜದ ಆಸ್ತಿಯಾಗಿ ರೂಪಿಸುವ ಡಾ.ಎಂ.ಮೋಹನ ಆಳ್ವರ ಯೋಜನೆಗಳು ಶ್ಲಾಘನೀಯ. ಈ ನಿಟ್ಟಿನಲ್ಲಿ ಈ ವರ್ಷ ₹33.85 ಕೋಟಿ ಶಿಕ್ಷಣ ಹಾಗೂ ಸಮಾಜ ಸೇವೆಗೆ ವ್ಯಯಿಸುತ್ತಿದ್ದಾರೆ. ನಿಮ್ಮ ಒಳ್ಳೆಯ ಕಾರ್ಯಗಳಿಗೆ ನಮ್ಮ ಬೆಂಬಲ ಇದೆ’ ಎಂದರು.

ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ , ‘ಸಮಗ್ರ ಶಿಕ್ಷಣ ಪರಿಕಲ್ಪನೆಯ ಶಿಕ್ಷಣವು ಆಳ್ವಾಸ್‌ ಮೂಲಕ ಸಿಗುತ್ತಿರುವುದು ಆಶಾದಾಯಕ ಬೆಳವಣಿಗೆ’ ಎಂದರು.

ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ಕೆ.ಅಭಯಚಂದ್ರ ಜೈನ್, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಇದ್ದರು.