ರಾಜ್ಯದ ಬಡ ರೈತ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂ.: ಸಿಎಂ ಘೋಷಣೆ – Vishwanews24
ರಾಜ್ಯದ ಬಡ ರೈತ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂ.: ಸಿಎಂ ಘೋಷಣೆ
ಹಾವೇರಿ : ಬಡ ರೈತ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂ. ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಹಾವೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೇಂದ್ರ ಹಾಗೂ ರಾಜ್ಯ ಪುರಸ್ಕೃತ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತರಿಗೆ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಭೀಜಕ್ಕೆ 10 ಸಾವಿರ ರೂ. ನೆರವು ನೀಡುವ ಯೋಜನೆ ಜಾರಿಗೆ ತರಲಾಗಿದೆ. ರಾಜ್ಯದಲ್ಲಿ 67 ಲಕ್ಷ ರೈತರಿಗೆ ಈ ಲಾಭ ದೊರಕಿಸಿ ಕೊಡಲಾಗುವುದು. ರೈತರಿಗೆ ಮೊಟ್ಟ ಮೊದಲ ಬಾರಿಗೆ ವಿಮೆ ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ.
ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಲಾಗುವುದು. ಈ ಭಾಗದ ಮೆಗಾ ಯೋಜನೆಗಳನ್ನು ಈ ಮಂಡಳಿ ಮೂಲಕ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಮಂಗಳೂರು: ಗೂಂಡಾ ಕಾಯ್ದೆ 11 ಮಂದಿ ಗಡಿಪಾರಿಗೆ ಜಿಲ್ಲಾಧಿಕಾರಿ ಆದೇಶ – Vishwanews24
