ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24
ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ
ಬೆಂಗಳೂರು: ರಾಜ್ಯದ ಹಲವೆಡೆ ಇಂದು (ಏ.13) ಮತ್ತು ನಾಳೆ (ಏ.14) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವಿದ್ದು, ಬಿಸಿಲ ತಾಪ ಏರುತ್ತಿರುವ ನಡುವೆಯೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯಲ್ಲಿ ಉಷ್ಣಾಂಶ ಇನ್ನಷ್ಟು ಏರಿಕೆಯಾಗಲಿದ್ದು, ಬೆಳಗಾವಿ, ಧಾರವಾಡ, ಮೈಸೂರು ಮತ್ತು ಗದಗ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ. ಮಳೆಯ ಸಮಯದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ.
ಇನ್ನೂ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ತುಂತುರು ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಗರಿಷ್ಠ ತಾಪಮಾನ 36-37 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ. ಇಂದು (ಏ.13) ಸಂಜೆ ಅಥವಾ ರಾತ್ರಿಯ ವೇಳೆ ಬೆಂಗಳೂರು ನಗರದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ 30% ಸಾಧ್ಯತೆಯಿದೆ ಎಂದು ತಿಳಿಸಿದೆ.
