ರಾಜ್ಯದಲ್ಲಿ 2023ಕ್ಕೆ ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ನಿಶ್ಚಿತ : ಸಿಎಂ ಬೊಮ್ಮಾಯಿ – Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ 2023ಕ್ಕೆ ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ನಿಶ್ಚಿತ : ಸಿಎಂ ಬೊಮ್ಮಾಯಿ

ಹಾವೇರಿ: ರಾಜ್ಯದಲ್ಲಿ 2023ಕ್ಕೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತವರು ಜಿಲ್ಲೆ ಹಾವೇರಿಯಲ್ಲಿ ಬೊಮ್ಮಾಯಿಯಲ್ಲಿ ಶಾಸಕ ಅರುಣಕುಮಾರ್ ಪೂಜಾರ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ಮೋದಿ ಸರ್ಕಾರ ಸಾಮಾಜಿಕ ನ್ಯಾಯ ನೀಡುವಲ್ಲಿ ತೊಡಗಿಸಿಕೊಂಡಿದೆ. ನಾವೂ, ನೀವು ಮಾಡಿದ ಜನಪರ ಕೆಲಸಗಳನ್ನು ಜನರ ಮುಂದಿಡೋಣ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ನಿಶ್ಚಿತ ಎಂದರು.

ನನ್ನನ್ನು ಹಲವರು ಹೊಗಳುತ್ತಾರೆ, ತೆಗಳುತ್ತಾರೆ. ಹೊಗಳಿದಾಗ ಹೆದರುತ್ತೇನೆ. ಆದರೆ ತೆಗಳಿದರೆ ಕೆಲಸದ ಮೂಲಕವೇ ಅವರಿಗೆ ಉತ್ತರ ಕೊಡುತ್ತೇನೆ ಎಂದು ತಿಳಿಸಿದರು.

ಹಿಂದೂಧರ್ಮವನ್ನು ಪುನರ್‌ ಸಂಘಟಿಸಲು ಸಾವರ್ಕರ್ ಮತ್ತೆ ಜೀವಂತಗೊಂಡಿದ್ದಾರೆ : ಚಕ್ರವರ್ತಿ ಸೂಲಿಬೆಲೆ – Vishwanews24

 

Leave a Reply