ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ 5 ಲಕ್ಷ ಮನೆ ನಿರ್ಮಾಣ : ಎಚ್.ಡಿ.ಕುಮಾರಸ್ವಾಮಿ ಭರವಸೆ – Vishwanews24
ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ 5 ಲಕ್ಷ ಮನೆ ನಿರ್ಮಾಣ ..
ವಾಸ ಮಾಡಲು ಮನೆ ಇಲ್ಲ ಎಂದು ಯಾವುದೇ ಕುಟುಂಬ ಹೇಳಬಾರದು ..
ಬೆಂಗಳೂರು : ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ 5 ಲಕ್ಷ ಮನೆ ನಿರ್ಮಿಸಲಾಗುವುದು. ವಾಸ ಮಾಡಲು ಮನೆ ಇಲ್ಲ ಎಂದು ಯಾವುದೇ ಕುಟುಂಬ ಹೇಳಬಾರದು. ಆ ರೀತಿಯ ವಾತಾವರಣ ನಿರ್ಮಾಣ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪಂಚರತ್ನ ಯಾತ್ರೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮುಂದಿನ ಐದು ವರ್ಷದಲ್ಲಿ ಮನೆ ಇಲ್ಲ ಎಂದು ಯಾರೂ ಹೇಳಬಾರದು. ಆ ರೀತಿಯ ವಾತಾವರಣ ನಿರ್ಮಿಸಿ ಬಡವರಿಗೆ ಮನೆ ವಿತರಿಸಲಾಗುವುದು. ಅಷ್ಟೇ ಅಲ್ಲ, ಪ್ರತಿ ಕುಟುಂಬಕ್ಕೆ 15 ರಿಂದ 20 ಸಾವಿರ ರು. ಆದಾಯ ಬರುವಂತಹ ಕಾರ್ಯಕ್ರಮ ರೂಪಿಸಲು ಚಾಲನೆ ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಮುಂಬಯಿ: ಜಾತಿಗಳು ಸೃಷ್ಟಿಯಾಗಿರುವುದು ದೇವರಿಂದಲ್ಲ, ಪುರೋಹಿತರಿಂದ : ಮೋಹನ್ ಭಾಗವತ್ – Vishwanews24
ನಾನು ಮುಖ್ಯಮಂತ್ರಿಯಾಗಿದ್ದಾಗ ಈ ಭಾಗದ ಅಭಿವೃದ್ಧಿಗೆ ಕೋಟ್ಯಂತರ ರು. ಬಿಡುಗಡೆ ಮಾಡಿದ್ದೆ. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಅದೆಲ್ಲವನ್ನೂ ವಾಪಸ್ ಪಡೆದರು. ಈ ಭಾಗದ ಮಾಜಿ ಶಾಸಕ ಮತ್ತು ಸಂಸದ ಸದಾನಂದಗೌಡ ಸೇರಿಕೊಂಡು ಅನುದಾನಕ್ಕೆ ಕೊಕ್ಕೆ ಹಾಕಿದರು. ನಗರದ ಹೊರ ಭಾಗದ ಹಳ್ಳಿಗಳನ್ನು ಸೇರಿಸಿ ಬಿಬಿಎಂಪಿ ರಚನೆ ಮಾಡಿ ಅಭಿವೃದ್ಧಿ ಮಾಡಿದ್ದು ನನ್ನ ಕಾಲದಲ್ಲಿ. ನಾವು ಆಗ ಲೂಟಿ ಮಾಡಿ ಅದರಲ್ಲಿ ಚುನಾವಣೆ ನಡೆಸಿದ್ದರೆ ಇಂದು ಬಿಜೆಪಿಯವರು ಮನೆಯಲ್ಲಿ ಇರುತ್ತಿದ್ದರು ಎಂದು ಟೀಕಿಸಿದರು.
ಕಾಂಗ್ರೆಸ್ ನವರು ಕೊಟ್ಟ ಮಾತು ಉಳಿಸಿಕೊಳ್ಳುವ ಕೆಲಸ ಮಾಡ್ತಾ ಬಂದಿದ್ದೇವೆ : ಡಿಕೆ ಶಿವಕುಮಾರ್ – Vishwanews24
