ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಶಾಕ್ ; ಇಂದು ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿ – vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಶಾಕ್ ; ಇಂದು ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿ

ಬೆಂಗಳೂರು : ರಾಜ್ಯದಲ್ಲಿ ಬಸ್ ಪ್ರಯಾಣ ದರ ಹೆಚ್ಚಳ ಮಾಡಲಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಬೆಲೆ ಏರಿಕೆ ಆಗಲಿದೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು, ಕಳೆದ 10 ವರ್ಷಗಳ ಸುದೀರ್ಘ ಅವಧಿಯಲ್ಲಿ ರಾಜ್ಯದಲ್ಲಿ ಕೇವಲ ಒಂದು ಬಾರಿಯಷ್ಟೇ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ ಹಾಗೂ 2025ರಲ್ಲಿಯೂ ಪ್ರಯಾಣ ದರ ಏರಿಕೆ ಮಾಡಲಾಗಿತ್ತು. ಇದೀಗ ಕೆಎಸ್ಸಾರ್ಟಿಸಿಯಲ್ಲಿ 9 ರೂ. ಟಿಕೆಟ್​​​ ದರ ಏರಿಕೆ ಆಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ :

ನ. 13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ: ನಮ್ಮ ಮೆಟ್ರೋ ಪಿಂಕ್ ಲೈನ್‌ನ ಎಲಿವೇಟೆಡ್ ಮಾರ್ಗ ಉದ್ಘಾಟನೆ – vishwanews24

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಲ್ಲಿ ಒಟ್ಟು 26,125 ಬಸ್‌ಗಳು ರಸ್ತೆಗೆ ಇಳಿಯುತ್ತಿದ್ದು, ಇದು ದಕ್ಷಿಣ ಭಾರತದಲ್ಲೇ ಅತ್ಯಂತ ದೊಡ್ಡ ಸಂಖ್ಯೆಯಾಗಿದೆ. ಸಾರಿಗೆ ಸಂಸ್ಥೆಗಳಲ್ಲಿ 1,03,646 ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರತಿದಿನ 24,179 ಮಾರ್ಗಗಳಲ್ಲಿ ಬಸ್‌ಗಳು ಸಂಚರಿಸುತ್ತಿದ್ದು, ದಿನಂಪ್ರತಿ 1.24 ಕೋಟಿ ಪ್ರಯಾಣಿಕರನ್ನು ಸುರಕ್ಷಿತವಾಗಿ ತಲುಪಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳು ನಷ್ಟ ಅನುಭವಿಸುತ್ತಿದ್ದು, ಬಸ್ ಪ್ರಯಾಣ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಇತ್ತೀಚಿಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಅದರಂತೆ ದರ ಪರಿಷ್ಕರಣೆ ಮಾಡಲಾಗಿದೆ.

ಇದನ್ನೂ ಓದಿ :

ನಾನು ಸ್ಪರ್ಧಿಸಿದ್ದರೆ ಭರ್ಜರಿ ಭರ್ಜರಿ ಬಹುಮತದಿಂದ ಗೆಲ್ಲುತ್ತಿದ್ದೆ: ಟ್ರಂಪ್ – vishwanews24

 

Leave a Reply