ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಹಾಗೂ ಯಡಿಯೂರಪ್ಪ ಸಿಎಂ ಆಗಲಿ ಎಂದು ಜನಾರ್ದನ ರೆಡ್ಡಿಯಿಂದ ವಿಶೇಷ ಪೂಜೆ – Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ಕಲಬುರಗಿ :ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ದೇಗುಲ ಭೇಟಿ ಆರಂಭಿಸಿದ್ದು, ನಾಲವಾರದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಶ್ರೀಕೋರಿಸಿದ್ದೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜನಾರ್ದನ ರೆಡ್ಡಿ ಅವರು ಬಿಜೆಪಿ ಅಧಿಕಾರಕ್ಕೆ ಬರಲಿ ಮತ್ತು ಬಿ.ಎಸ್. ಯಡಿಯೂರಪ್ಪ ಸಿಎಂ ಆಗಲಿ ಎಂದು ಪ್ರಾರ್ಥನೆ ಮಾಡಿದ್ದಾರೆ.

ವಿಶೇಷ ಪೂಜೆ ಬಳಿಕ ವರದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟದ ಅಭಿವೃದ್ಧಿಯಾಗಬೇಕಿದೆ. ಅದಕ್ಕಾಗಿ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಬೇಕು. ಇದರೊಂದಿಗೆ ಇಡೀ ನಮ್ಮ ರಾಜ್ಯದ ಕಲ್ಯಾಣವಾಗಲಿ ಎನ್ನುವುದೇ ಆಶಯವಾಗಿದೆ ಎಂದು ಹೇಳಿದರು.