ರಾಜ್ಯದಲ್ಲಿ ರಾಜಕೀಯದ ಸುನಾಮಿ ಅಲೆ JDS ಪರ, ಎಲ್ಲ ಪಕ್ಷಗಳೂ ಕೊಚ್ಚಿ ಹೋಗಿ ಬಹುಮತದೊಂದಿಗೆ JDS ಅಧಿಕಾರಕ್ಕೆ :ಎಚ್.ಡಿ. ಕುಮಾರಸ್ವಾಮಿ – Vishwanews24
ರಾಜ್ಯದಲ್ಲಿ ರಾಜಕೀಯದ ಸುನಾಮಿ ಅಲೆ JDS ಪರ, ಎಲ್ಲ ಪಕ್ಷಗಳೂ ಕೊಚ್ಚಿ ಹೋಗಿ ಬಹುಮತದೊಂದಿಗೆ JDS ಅಧಿಕಾರಕ್ಕೆ :ಎಚ್.ಡಿ. ಕುಮಾರಸ್ವಾಮಿ
ತುಮಕೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರಾಜ್ಯದಲ್ಲಿ ರಾಜಕೀಯದ ಸುನಾಮಿ ಅಲೆ ಎದ್ದಿದ್ದು, ಜನತಾ ದಳದ ಪರವಾಗಿದೆ. ಜೆಡಿಎಸ್‌ನ ಈ ಸುನಾಮಿ ಅಲೆಯಲ್ಲಿ ಎಲ್ಲ ಪಕ್ಷಗಳೂ ಕೊಚ್ಚಿ ಹೋಗಲಿವೆ ಎಂದರು.
ನಗರದ ಸಿದ್ಧಗಂಗಾ ಮಠಕ್ಕೆ ಪಂಚರತ್ನ ರಥಯಾತ್ರೆ ಆಗಮಿಸಿದ ಸಂದರ್ಭದಲ್ಲಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ರಾಜ್ಯದ ಜನತೆ ಜೆಡಿಎಸ್‌ಗೆ ಬಹುಮತ ನೀಡುವ ತೀರ್ಮಾನ ಮಾಡಿದ್ದಾರೆ. ರಾಜಕೀಯ ಗಾಳಿ ಗಂಧ ಗೊತ್ತಿಲ್ಲದವರೂ ಸಹ ಕುಮಾರಣ್ಣ ಸಿಎಂ ಆಗಬೇಕು ಎಂಬ ಮಾತುಗಳನ್ನಾಡುತ್ತಿದ್ದಾರೆ ಎಂದರು.
ಪೋಕ್ಸೋ ಪ್ರಕರಣದಲ್ಲಿ ನಿರಪರಾಧಿಯನ್ನು ಬಂಧಿಸಿದ ಮಹಿಳಾ ಪೊಲೀಸ್ ಅಧಿಕಾರಿಗಳಿಗೆ 5 ಲಕ್ಷ ರೂ. ದಂಡ – Vishwanews24
ರಾಜ್ಯದ 36 ವಿಧಾನಸಭಾ ಕ್ಷೇತ್ರದಲ್ಲಿ ಮೊದಲನೇ ಹಂತದ ಕಾರ್ಯಕ್ರಮ ನಿಗದಿ ಮಾಡಲಾಗಿದೆ. ಜನವರಿ 3 ರಿಂದ 2ನೇ ಹಂತದ ರಥಯಾತ್ರೆ ಕಲಬುರಗಿ, ಬೀದರ್, ರಾಯಚೂರು, ವಿಜಯಪುರ ಸೇರಿ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಯಾತ್ರೆ ನಡೆಯಲಿದೆ ಎಂದರು.
ಅಭ್ಯರ್ಥಿಗಳ ಪಟ್ಟಿ ಸದ್ಯದಲ್ಲೇ ಘೋಷಣೆ: ಮುಂಬರುವ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಸದ್ಯದಲ್ಲೇ ಘೋಷಣೆ ಮಾಡಲಾಗುವುದು. ಇದಕ್ಕೆ ಪೂರಕವಾಗಿ ರಥಯಾತ್ರೆ ಸಂಚರಿಸಿದ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆ ಯಲ್ಲಿ ಈಗಾಗಲೇ 10 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಡಿ. 7ರಂದು ಕೆಜಿಎಫ್ನಲ್ಲಿ ರಥಯಾತ್ರೆ ನಡೆಯಲಿದ್ದು, ಆ ಸಂದರ್ಭದಲ್ಲಿ ಆ ಜಿಲ್ಲೆಯ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುತ್ತದೆ ಎಂದರು.
