ರಾಜ್ಯಾದ್ಯಾಂತ ವರುಣನ ಆರ್ಭಟ: ಸರ್ಕಾರದಿಂದ 50 ಕೋಟಿ ಹಣ ಬಿಡುಗಡೆ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ರಾಜ್ಯಾದ್ಯಾಂತ ಮಳೆಯ ಆರ್ಭಟ ಜೋರಾಗಿದ್ದು, ಜನಜೀವನ ಮೂರಾಬಟ್ಟೆಯಾಗಿದೆ. ಜಿಲ್ಲೆಗಳಲ್ಲಾಗುವ ಪ್ರವಾಹ ಸ್ಥಿತಿಯನ್ನು ನಿಭಾಯಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದ್ದು, ರಾಜ್ಯ ಸರ್ಕಾರ 50 ಕೋಟಿ ಹಣ ಬಿಡುಗಡೆ ಮಾಡಿದೆ.

ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಕ್ಷೇತ್ರ ಬಿಟ್ಟು ಹೋಗದಂತೆ ಸೂಚನೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಅಗತ್ಯ ಇದ್ದರೆ ಇನ್ನಷ್ಟು ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಅತಿ ತುರ್ತು ಕೆಲಸಗಳಿಗೆ ನೀವೆ ತೀರ್ಮಾನ ತೆಗೆದುಕೊಂಡು ಮುಂದುವರೆಯಿರಿ ಮತ್ತು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳದಲ್ಲೇ ಪರಿಹಾರ ವಿತರಣೆ ಸೇರಿದಂತೆ ಇತರ ಕ್ರಮಗಳನ್ನು ಕೈಗೊಳ್ಳಿ ಎಂದು ಸಚಿವರುಗಳಿಗೆ ಸಿಎಂ ಆದೇಶ ನೀಡಿದ್ದಾರೆ.