ರಾಮ ಮಂದಿರ ನಿರ್ಮಾಣಕ್ಕೆ 2 ಲಕ್ಷ ರೂ. ದೇಣಿಗೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ -Vishwanews24
ರಾಮ ಮಂದಿರ ನಿರ್ಮಾಣಕ್ಕೆ 2 ಲಕ್ಷ ರೂ. ದೇಣಿಗೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ -Vishwanews24
ಬೆಳಗಾವಿ: ಅಯೋದ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕಾರ್ಯಕ್ಕಾಗಿನ ದೇಣಿಗೆಯನ್ನು ಸಂಗ್ರಹಿಸಲಾಗುತ್ತಿದ್ದು, ಈ ಮಹತ್ಕಾರ್ಯಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ 2 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಣೆ ಮಾಡುತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹೆಬ್ಬಾಳ್ಕರ್ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕಿ ಎರಡು ಲಕ್ಷ ರೂಪಾಯಿ ಚೆಕ್ಅನ್ನು ಹಸ್ತಾಂತರಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕಿಯ ಸಹೋದರ ಚನ್ನರಾಜ ಹಟ್ಟಿಹೊಳಿ, ವಿದ್ಯಾಭಾರತಿ ಕರ್ನಾಟಕ ಪ್ರಾಂತ ಅಧ್ಯಕ್ಷ ಪರಮೇಶ್ವರ ಹೆಗಡೆ, ವಿಶ್ವಹಿಂದೂ ಪರಿಷತ್ ಸಹ ಕೋಶಾಧ್ಯಕ್ಷ ಕೃಷ್ಣ ಭಟ್, ಜಿಲ್ಲಾ ವ್ಯವಸ್ಥಾ ಪ್ರಮುಖ್ ವಿಶಾಲ ಖಂಡಾಗಳೆ ಮುಂತಾದವರಿದ್ದರು.
ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ 45 ದಿನಗಳ ಕಾಲ ದೇಣಿಗೆ ಸಂಗ್ರಹಿಸಲು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಎಂಬ ಹೆಸರಿನಲ್ಲಿ ನಿಧಿ ಸಂಗ್ರಹ ಮಾಡಲಾಗುತ್ತಿದೆ.
