ರಾಮ ರಾಜ್ಯದಲ್ಲಿ ಬಡವರ ರಕ್ತ ಹೀರಲಾಗುತ್ತಿದೆ : ಸಿದ್ದರಾಮಯ್ಯ – Vishwanews24
ಪ್ರಧಾನಿ ನರೇಂದ್ರ ಮೋದಿ ಅಚ್ಚೇದಿನ್ ಬರುತ್ತದೆ ಎಂದು ಜನರಿಗೆ ಈಗ ನರಕ ತೋರಿಸುತ್ತಿದ್ದಾರೆ..
ರಾಮ ರಾಜ್ಯದಲ್ಲಿ ಬಡವರ ರಕ್ತ ಹೀರಲಾಗುತ್ತಿದೆ : ಸಿದ್ದರಾಮಯ್ಯ
ಬೆಂಗಳೂರು : ರಾಮ ರಾಜ್ಯದಲ್ಲಿ ಬಡವರ ರಕ್ತ ಹೀರಲಾಗುತ್ತಿದೆ. ರಾಮನ ಹೆಸರನ್ನೇ ಹೇಳಿಕೊಂಡು ಓಡಾಡುವ ಬಿಜೆಪಿಯವರಿಗೆ ಇದು ಅರ್ಥವೇ ಆಗುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ 100 ನೌಟೌಟ್ ಎಂಬ ಅಭಿಯಾನದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅಚ್ಚೇದಿನ್ ಬರುತ್ತದೆ ಎಂದು ಭರವಸೆ ನೀಡುತ್ತಲೇ ಜನರಿಗೆ ಈಗ ನರಕ ತೋರಿಸುತ್ತಿದ್ದಾರೆ. ಇಂತಹ ಬಿಕ್ಕಟ್ಟಿನ ಸಮಯದಲ್ಲಿ ಇಂಧನ ಬೆಲೆ ಏರಿಕೆ ಮೂಲಕ ಜನರನ್ನು ದೋಚುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾವಣನ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 59 ರೂ. ರಾಮನ ಭಾರತದಲ್ಲಿ 100 ರೂ. ಇದೆ. ಈಗ ರಾಮ ರಾಜ್ಯದಲ್ಲಿ ಬಡವರ ರಕ್ತ ಹೀರಾಲಾಗುತ್ತಿದೆ. ರಾಮನ ಹೆಸರನ್ನು ಹೇಳಿಕೊಂಡು ಓಡಾಡುವ ಬಿಜೆಪಿಯವರಿಗೆ ಇದು ಅರ್ಥವಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
