ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡದಿರುವುದು ಬಿಜೆಪಿಯ ಮನಸ್ಥಿತಿಯನ್ನು ತೋರುತ್ತದೆ , ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋದರಷ್ಟೇ ಅಖಂಡ ಭಾರತ ನಿರ್ಮಿಸಲು ಸಾಧ್ಯ : ಡಿ.ಕೆ.ಸುರೇಶ್ ವಾಗ್ದಾಳಿ -Vishwanews24
ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡದಿರುವುದು ಬಿಜೆಪಿಯ ಮನಸ್ಥಿತಿಯನ್ನು ತೋರುತ್ತದೆ..
ಶ್ರೀರಾಮ ಬಿಜೆಪಿಯ ಸ್ವತ್ತಲ್ಲ. ದೇಶದ 130 ಕೋಟಿ ಜನರ ಆಸ್ತಿ
ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋದರಷ್ಟೇ ಅಖಂಡ ಭಾರತ ನಿರ್ಮಿಸಲು ಸಾಧ್ಯ : ಡಿ.ಕೆ.ಸುರೇಶ್ ವಾಗ್ದಾಳಿ -Vishwanews24
ರಾಮನಗರ: ಶ್ರೀರಾಮ ಬಿಜೆಪಿಯ ಸ್ವತ್ತಲ್ಲ. ದೇಶದ 130 ಕೋಟಿ ಜನರ ಆಸ್ತಿ ಎಂದು ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.
ಬಸವನಪುರ ಗ್ರಾಮದಲ್ಲಿ ಗುರುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಶ್ರೀರಾಮ ಕೇವಲ ಬಿಜೆಪಿಗೆ ಮಾತ್ರ ಸೀಮಿತವಲ್ಲ. ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡದಿರುವುದು ಬಿಜೆಪಿಯ ಮನಸ್ಥಿತಿಯನ್ನು ತೋರುತ್ತದೆ’ ಎಂದು ದೂರಿದರು.
ರಾಮಮಂದಿರ ಕಾರ್ಯಕ್ರಮವನ್ನು ಬಿಜೆಪಿ ಸ್ವಾರ್ಥಕ್ಕೆ ಬಳಸಿಕೊಂಡಿದೆ. ತಮಗೆ ಮಾತ್ರವೇ ಸೀಮಿತಗೊಳಿಸುವ ಮೂಲಕ ಸರ್ವಾಧಿಕಾರ, ಸಾರ್ವಭೌಮತ್ವ ಪಡೆಯಲು ಯತ್ನಿಸುತ್ತಿದೆ. ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋದರಷ್ಟೇ ಅಖಂಡ ಭಾರತ ನಿರ್ಮಿಸಲು ಸಾಧ್ಯ ಎಂದರು.
