ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ : ಚೆನ್ನೈನಲ್ಲಿ ಐವರ ಬಂಧನ – Vishwanews24

Featured, ರಾಷ್ಟ್ರ ನ್ಯೂಸ್

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ : ಚೆನ್ನೈನಲ್ಲಿ ಐವರ ಬಂಧನ

ಚೆನ್ನೈ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ  ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಐವರನ್ನು ಬಂಧಿಸಲಾಗಿದೆ.

ಚೆನ್ನೈನ ಮನ್ನಾಡಿ, ಮುಥಿಯಾಲ್ ಪೇಟ್ಟೈ ನಲ್ಲಿ ಇಂದು ಬೆಳಗ್ಗೆ ರಾಷ್ಟ್ರೀಯ ತನಿಖಾ ದಳ (NIA) ದಾಳಿ ನಡೆಸಿತ್ತು. ಆರಂಭದಲ್ಲಿ ಮೂವರು, ನಂತರ ಐವರನ್ನು ವಶಕ್ಕೆ ಪಡೆಯಲಾಗಿತ್ತು. ವಿಚಾರಣೆಯ ಬಳಿಕ ಐವರನ್ನು ಬಂಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಮಾರ್ಚ್‌ 1 ಶುಕ್ರವಾರದಂದು ವೈಟ್‌ಫೀಲ್ಡ್‌ ಬಳಿ ಇರುವ ದಿ ರಾಮೇಶ್ವರಂ ಕೆಫೆಯಲ್ಲಿ ಎರಡು ಬಾಂಬ್‌ ಸ್ಫೋಟಗೊಂಡಿತ್ತು. ಈ ಬಾಂಬ್‌ ದಾಳಿಯಿಂದ 10 ಮಂದಿ ಗಾಯಗೊಂಡಿದ್ದರು.

ಉಡುಪಿ : ಬನ್ನಂಜೆ ಬಾಬು ಅಮೀನ್ ಜಾನಪದ ವಿದ್ವಾಂಸ ಪ್ರಶಸ್ತಿ ಪ್ರದಾನ – Vishwanews24

Leave a Reply