ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಬಳ್ಳಾರಿಯಲ್ಲಿ ಓರ್ವ ವಶಕ್ಕೆ – Vishwanews24

Featured, ರಾಜ್ಯ ನ್ಯೂಸ್

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಬಳ್ಳಾರಿಯಲ್ಲಿ ಓರ್ವ ವಶಕ್ಕೆ

ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ ಅಧಿಕಾರಿಗಳು ತೀವ್ರ ತನಿಖೆಗೆ ಇಳಿದಿದ್ದು, ಇದೀಗ ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

ಇಂದು (ಬುಧವಾರ) ಮುಂಜಾನೆ 4 ಗಂಟೆಗೆ ಶಬ್ಬೀರ್‌ ಎಂಬವನನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ರಾಮೇಶ್ವರಂ ಬಾಂಬ್ ಪ್ರಕರಣಕ್ಕೂ ಯುವಕನಿಗೂ ಲಿಂಕ್ ಇದ್ಯಾ ಎಂಬ ಅನುಮಾನದ ಮೇಲೆ ಶಬ್ಬೀರ್‌ ನನ್ನು ತನಿಖೆಗೆ ಒಳಪಡಿಸಲಾಗಿದೆ.

ರಥೋತ್ಸವ ನೋಡಲು ಬಂದ ಬಾಲಕಿಯನ್ನುಅಪಹರಿಸಿ,ಸಾಮೂಹಿಕ ಅತ್ಯಾಚಾರ: 7 ಮಂದಿ ಬಂಧನ – Vishwanews24

ಶಂಕಿತ ಉಗ್ರ ಬಳ್ಳಾರಿಗೆ ಬಂದ ಸಮಯದಲ್ಲಿ ಕೌಲ್ ಬಜಾರ್ ನಿವಾಸಿ ಶಬ್ಬೀರ್‌ ನನ್ನು ಭೇಟಿ ಮಾಡಿದ್ದ. ಅಲ್ಲದೇ ಹೈದರಾಬಾದ್‍ಗೆ ಹೋಗಲು ಆತನಿಗೆ ಸಹಾಯ ಮಾಡಿದ್ದ ಎನ್ನುವ ಆರೋಪದ ಮೇಲೆ ಅಧಿಕಾರಿಗಳು ಶಬ್ಬೀರ್‌ ನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಶಂಕಿತ ಉಗ್ರ ಹೈದರಾಬಾದ್‍ನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

ಮಲ್ಪೆ :  ಬೋಟ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಒರಿಸ್ಸಾ ಮೂಲದ  ಯುವಕ ನಾಪತ್ತೆ – Vishwanews24

Leave a Reply