ರಾಷ್ಟ್ರಪತಿ ಚುನಾವಣೆ – ದ್ರೌಪದಿ ಮುರ್ಮುಗೆ ಜೆಡಿಎಸ್ ಬೆಂಬಲ : ಹೆಚ್.ಡಿ.ಕುಮಾರಸ್ವಾಮಿ – Vishwanews24

Featured, ರಾಜ್ಯ ನ್ಯೂಸ್

ರಾಷ್ಟ್ರಪತಿ ಚುನಾವಣೆ – ದ್ರೌಪದಿ ಮುರ್ಮುಗೆ ಜೆಡಿಎಸ್ ಬೆಂಬಲ : ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಷ್ಟ್ರಪತಿ ಆಯ್ಕೆ ಸಂಬಂಧ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ದ್ರೌಪದಿ ಮುರ್ಮು ಅವರಿಗೆ ಬಹುಮತದ ಸಂಖ್ಯೆ ಈಗಾಗಲೇ ಸಿಕ್ಕದೆ. ನಮ್ಮ ಪಕ್ಷದ ಬೆಂಬಲ ಅವಶ್ಯಕತೆ ಇಲ್ಲ. ಆದರೂ ನಮ್ಮ ಬೆಂಬಲ ಕೇಳಿದ್ದಾರೆ. ಅದು ಅವರ ಔದಾರ್ಯ ಎಂದು ಬೆಂಬಲ ನೀಡುವ ಬಗ್ಗೆ ಪರೋಕ್ಷವಾಗಿ ಹೇಳಿದರು.

ನನ್ನ ಪ್ರಕಾರ ಮುರ್ಮು ಈಗಾಗಲೇ ಗೆದ್ದಾಗಿದೆ.‌ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಮುರ್ಮು ಅವರು ಎರಡು ಬಾರಿ ದೂರವಾಣಿ ಕರೆ ಮಾಡಿ ಬೆಂಬಲಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರಿಗೆ ಬಂದು ಮನವಿ ಮಾಡಲು‌ ಅವರು ಸಮಯ ಕೋರಿದ್ದರು. ಅವರು ಖುದ್ದು ಬಂದು ಮನವಿ ಮಾಡುವ ಅವಶ್ಯಕತೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಚುನಾವಣಾ ಅಭ್ಯರ್ಥಿಯಾಗಿ ಮುರ್ಮು ಕಣದಲ್ಲಿದ್ದಾರೆ. ಅವರ ಹಿನ್ನೆಲೆ ಏನು, ಜೀವನದಲ್ಲಿ ಎಷ್ಟು ಕಷ್ಟ ಅನುಭವಿಸಿದ್ದಾರೆ, ತಳಮಟ್ಟದ ಸಮುದಾಯದಿಂದ ಹೇಗೆ ಬೆಳೆದು ಬಂದಿದ್ದಾರೆ ಎಂಬುದನ್ನು ನಾನು ಅರಿತಿದ್ದೇನೆ. ಆದಿವಾಸಿ ಸಮುದಾಯದ ಮಹಿಳೆಯೊಬ್ಬರು ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸ್ಪೂರ್ತಿದಾಯಕ ಎಂದು ಹೇಳಿದರು.

ಉದಯಪುರ ಪ್ರಕರಣ : ಕೊಲೆಗೆಡುಕರನ್ನು ಗಲ್ಲಿಗೇರಿಸಬೇಕು : ಸಿಎಂ ಬೊಮ್ಮಾಯಿ ಆಕ್ರೋಶ – Vishwanews24

 

Leave a Reply