ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ : ಮಾಯಾವತಿ – Vishwanews24

Featured, ರಾಷ್ಟ್ರ ನ್ಯೂಸ್

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ : ಮಾಯಾವತಿ

ಲಕ್ನೋ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾದ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವುದಾಗಿ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಶನಿವಾರ ಹೇಳಿದ್ದಾರೆ.

ಬುಡಕಟ್ಟು ನಾಯಕರಾದ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವ ನಿರ್ಧಾರವನ್ನು ಬಹುಜನ ಸಮಾಜ ಪಕ್ಷವು “ಬುಡಕಟ್ಟು ಸಮುದಾಯವನ್ನು ನಮ್ಮ ಚಳುವಳಿಯ ಪ್ರಮುಖ ಭಾಗವೆಂದು ಗುರುತಿಸಿದೆ” ಎಂದು ಅವರು ಹೇಳಿದ್ದಾರೆ

ಪ್ರತಿಪಕ್ಷಗಳು ತನ್ನನ್ನು ಸಂಪರ್ಕಿಸಿಲ್ಲ ಎಂದ ಅವರು, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೊದಲ ಸಭೆಗೆ ಕೆಲವು ಆಯ್ದ ಪಕ್ಷಗಳನ್ನು ಮಾತ್ರ ಕರೆದಿದ್ದು ಶರದ್ ಪವಾರ್ ಕೂಡ ಬಿಎಸ್ಪಿಯನ್ನು ಚರ್ಚೆಗೆ ಕರೆಯಲಿಲ್ಲ ಎಂದು ದೂರಿದ್ದಾರೆ.

7 ರಿಂದ 11 ವರ್ಷದ ಮಕ್ಕಳಿಗೆ ಕೋವೊವ್ಯಾಕ್ಸ್ ಲಸಿಕೆ ತುರ್ತು ಬಳಕೆಗೆ ಅನುಮೋದನೆ ನೀಡುವಂತೆ ಶಿಫಾರಸು – Vishwanews24

Leave a Reply