ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಆಸ್ಪತ್ರೆಗೆ ದಾಖಲು -Vishwanews24

Featured, ರಾಷ್ಟ್ರ ನ್ಯೂಸ್

ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಆಸ್ಪತ್ರೆಗೆ ದಾಖಲು -Vishwanews24

ನವದೆಹಲಿ, : ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಅವರು ದೆಹಲಿಯ ಸೇನೆಯ ಸಂಶೋಧನೆ ಮತ್ತು ರೆಫರಲ್ (ಆರ್ & ಆರ್) ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಎದೆಯಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

“ಭಾರತದ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರು ಇಂದು ಬೆಳಿಗ್ಗೆ ಎದೆಯಲ್ಲಿ ಅಸ್ವಸ್ಥತೆ ಕಾಡಿದ ಹಿನ್ನೆಲೆಯಲ್ಲಿ ದಾಖಲಾಗಿದ್ದು, ಅವರ ಆರೋಗ್ಯ ತಪಾಸಣೆಗೆ ನಡೆಸಲಾಗಿದ್ದು ಅವರ ಸ್ಥಿತಿಗತಿಗಳನ್ನು ಅವಲೋಕಿಸಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ” ಎಂದು ಸೇನಾ ಆಸ್ಪತ್ರೆಯ ವೈದ್ಯಕೀಯ ಬುಲೆಟಿನ್ ತಿಳಿಸಿದೆ.

ಇದನ್ನೂ ಓದಿ :ಮಧ್ಯಾಹ್ನ 2.30ಕ್ಕೆ ರಮೇಶ್ ಜಾರಕಿಹೊಳಿ ವಿರುದ್ಧ ಸ್ವತಃ ಯುವತಿ ಬರೆದುಕೊಟ್ಟಿರುವ ದೂರು ದಾಖಲು : ಸಿಡಿ ಲೇಡಿ ಪರ ವಕೀಲ -Vishwanews24