ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಗೆ ಸೂಕ್ತ ; 2019 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಸುಲಭವಲ್ಲ : ಸಿಎಂ ಹೆಚ್.ಡಿ. ಕುಮಾರಸ್ವಾಮಿ

Featured, ದೇಶ

2019 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಸುಲಭವಲ್ಲ , ಬಿಜೆಪಿಯನ್ನು ಸೋಲಿಸಲು ಏನು ಅಗತ್ಯವೋ ಅದೆಲ್ಲವನ್ನೂ ಮಾಡಬೇಕು. ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಗೆ ಸೂಕ್ತ :ಸಿಎಂ ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ವಿರೋಧ ಪಕ್ಷಗಳಿಂದ ಪ್ರಧಾನಿ ಅಭ್ಯರ್ಥಿಯಾಗಲು ಸಮರ್ಥ ನಾಯಕ ಎಂದು ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2014 ರಲ್ಲಿ ಇದ್ದಂಥ ರಾಜಕೀಯ ಸ್ಥಿತಿ ಈಗ ಇಲ್ಲ. 2019 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಸುಲಭವಲ್ಲ. ಹೀಗಾಗಿ ದೇಶದ ಹಿತದೃಷ್ಟಿಯಿಂದ ಬಿಜೆಪಿಯೇತರ ಪಕ್ಷಗಳೆಲ್ಲ ಒಂದಾಗಬೇಕು. ಬಿಜೆಪಿಯನ್ನು ಸೋಲಿಸಲು ಏನು ಅಗತ್ಯವೋ ಅದೆಲ್ಲವನ್ನೂ ಮಾಡಬೇಕು ಎಂದಿದ್ದಾರೆ.

ನರೇಂದ್ರ ಮೋದಿ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ಸಾಧಿಸಿದ್ದೇನು ಎಂದು ಪ್ರಶ್ನಿಸಿರುವ ಹೆಚ್ಡಿಕೆ, ಒಂದೇ ಪಕ್ಷದ ಸರ್ಕಾರಗಳಿಗಿಂತ ಸಮ್ಮಿಶ್ರ ಸರ್ಕಾರಗಳ ಕಾಲದಲ್ಲೇ ದೇಶದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳಾಗಿವೆ ಎಂದರು.