ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಭರತ್ ಶೆಟ್ಟಿ ಮೇಲೆ ಎಫ್​ಐಆರ್ – vishwanews24

Featured, ದಕ್ಷಿಣ ಕನ್ನಡ

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಭರತ್ ಶೆಟ್ಟಿ ಮೇಲೆ ಎಫ್​ಐಆರ್

ಮಂಗಳೂರು: ಕಾಂಗ್ರೆಸ್ ಸಂಸದ, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಡಾ. ವೈ ಭರತ್ ಶೆಟ್ಟಿ ಮೇಲೆ ಎಫ್​ಐಆರ್​​ ದಾಖಲಿಸಲಾಗಿದೆ.

ಪಾಲಿಕೆ ಸದಸ್ಯ ಕಾಂಗ್ರೆಸ್​​ನ ಅನಿಲ್ ಕುಮಾರ್ ನೀಡಿದ್ದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಡುಬಿದ್ರಿ : ಕಂಪೆನಿ ಹೊರಬಿಡುವ ರಾಸಾಯನಿಕ ಮಿಶ್ರಿತ ನೀರಿನಿಂದ ಗ್ರಾಮಸ್ಥರಿಗೆ ತೊಂದರೆ – vishwanews24

ಮಂಗಳೂರಿನ ಕಾವೂರಿನಲ್ಲಿ ಸೋಮವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ್ದ ಭರತ್ ಶೆಟ್ಟಿ, ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸುತ್ತಿದೆ ಎಂದಿದ್ದರು. ರಾಹುಲ್ ಗಾಂಧಿ ಶಿವನ ಫೋಟೊ ಹಿಡಿದು ನಿಂತಿದ್ದ. ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗಬಹುದು ಅಂತ ಗೊತ್ತಿಲ್ಲ ಎಂದು ಭರತ್ ಶೆಟ್ಟಿ ಹೇಳಿದ್ದರು.

ಉಡುಪಿ: ಮಾದಕ ವಸ್ತು ಸೇವನೆ ; ಯುವಕನ ಬಂಧನ – vishwanews24

Leave a Reply