ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದು ನಮ್ಮ ಗುರಿ : ಮೊಹಮ್ಮದ್ ನಲಪಾಡ್ – VIshwanews24
ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷನಾಗಿ ಮೊಹಮ್ಮದ್ ನಲಪಾಡ್..
ಫೆಬ್ರವರಿ 10 ರಂದು ಅಧಿಕೃತವಾಗಿ ಅಧಿಕಾರ ಸ್ವೀಕಾರ..
ಕಾಂಗ್ರೆಸ್ ಭವನದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಸಮುದಾಯದ ಗುರುಗಳು ವಿಶೇಷ ಪ್ರಾರ್ಥನೆ..
ಯುವಕರನ್ನು ಒಟ್ಟಾಗಿ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ..
ಬೆಂಗಳೂರು: ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷನಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕರಿಸಿದ್ದಾರೆ. ಬಳಿಕ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಸಮುದಾಯದ ಗುರುಗಳು ವಿಶೇಷ ಪ್ರಾರ್ಥನೆ ಸಲ್ಲಿಸಿ ಕಚೇರಿ ಪೂಜೆ ನೆರವೇರಿಸಿದರು.
ಫೆಬ್ರವರಿ 10 ರಂದು ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡುತ್ತೇನೆ. ಎಲ್ಲಾ ಯುವಕರನ್ನು ಒಟ್ಟಾಗಿ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ. 2018ರಲ್ಲಿ ಆದ ತಪ್ಪು ಮತ್ತೆ ಆಗುವುದಿಲ್ಲ. ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದು ನಮ್ಮ ಗುರಿ ಎಂದು ಹೇಳಿದರು.
ಇದೇ ವೇಳೆ ನಲಪಾಡ್ ತಂದೆ ಹ್ಯಾರಿಸ್ ಅವರು ಮಾತನಾಡಿ, ದೇವರಿಗೆ ಕೃತಜ್ಞತೆ ಹೇಳುತ್ತೇನೆ. ತುಂಬಾ ಸಂತೋಷವಾಗುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಗಟ್ಟಿ ಮಾಡಿದಾಗ ಇನ್ನು ಸಂತೋಷ ಆಗುತ್ತದೆ. ಯಾವುದೇ ರಾಜಕೀಯ ಮಾಡದೇ ಎಲ್ಲರನ್ನು ಒಟ್ಟಾಗಿ ಹೋಗಬೇಕು. ಯುವಕರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ನಲಪಾಡ್ ಮಾಡುತ್ತಾನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
