ರಾಹುಲ್ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಕ್ಷಮೆಯಾಚಿಸಲಿದ್ದಾರೆ ಎಂದು ಭಾವಿಸಿದ್ದೇನೆ : ಡಿಕೆಶಿ – Vishwanews24
ರಾಹುಲ್ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಕ್ಷಮೆಯಾಚಿಸಲಿದ್ದಾರೆ ಎಂದು ಭಾವಿಸಿದ್ದೇನೆ : ಡಿಕೆಶಿ – Vishwanews24
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕ್ಷಮೆಯಾಚಿಸಬಹುದು ಎಂಬುದಾಗಿ ಭಾವಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Yesterday I said I believe we should be civil and respectful in politics, even to our opponents. I hope the BJP agrees with me, and will apologise for their state president’s abusive and unparliamentary remarks against Shri Rahul Gandhi.@RahulGandhi
— DK Shivakumar (@DKShivakumar) October 19, 2021
‘ರಾಜಕೀಯದಲ್ಲಿ ವಿರೋಧಿಗಳ ಜತೆಗೂ ನಾಗರಿಕ ಮೌಲ್ಯಗಳ ಜತೆಗೆ ಗೌರವಯುತವಾಗಿ ನಡೆದುಕೊಳ್ಳುವುದರಲ್ಲಿ ನಂಬಿಕೆ ಇದೆ ಎಂದು ನಿನ್ನೆ ನಾನು ಹೇಳಿದ್ದೆ. ಇದನ್ನು ಬಿಜೆಪಿಯು ಒಪ್ಪಲಿದೆ ಎಂದೂ ಭಾವಿಸಿದ್ದೇನೆ. ರಾಹುಲ್ ಗಾಂಧಿಯವರನ್ನು ಅಸಂಸದೀಯ ಪದಗಳಿಂದ ನಿಂದಿಸಿರುವ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರು ಕ್ಷಮೆಯಾಚಿಸಲಿದ್ದಾರೆ ಎಂದು ಭಾವಿಸಿದ್ದೇನೆ’ ಎಂದು ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
