ರಿಷಭ್ ಪಂತ್ ಆರೋಗ್ಯದಲ್ಲಿ ಸುಧಾರಣೆ: ಐಸಿಯುನಿಂದ ಖಾಸಗಿ ವಾರ್ಡ್ಗೆ ಶಿಫ್ಟ್ – Vishwanews24
ರಿಷಭ್ ಪಂತ್ ಆರೋಗ್ಯದಲ್ಲಿ ಸುಧಾರಣೆ: ಐಸಿಯುನಿಂದ ಖಾಸಗಿ ವಾರ್ಡ್ಗೆ ಶಿಫ್ಟ್
ಇತ್ತೀಚೆಗೆ ಕಾರು ಅಪಘಾತದಲ್ಲಿ ಗಾಯಗೊಂಡು ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತೀಯ ಕ್ರಿಕೆಟ್ ತಂಡದ ಆಟಗಾರ ರಿಷಭ್ ಪಂತ್ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡುಬಂದಿದೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮ್ಯಾಕ್ಸ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಬಳಿ ರಿಷಭ್ ಪಂತ್ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಂಡಿದ್ದರು. ಬಳಿಕ ಸುಮಾರು ಒಂದು ಗಂಟೆ ಕಾಲ ಪಂತ್ ತಾಯಿ ಸರೋಜ್ ಪಂತ್ ಹಾಗೂ ಸಹೋದರಿ ಸಾಕ್ಷಿ ಜೊತೆ ಮಾತುಕತೆ ನಡೆಸಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದರು. ಇದೇ ವೇಳೆ ರಿಷಭ್ ಪಂತ್ ಬಗ್ಗೆ ಚಿಂತಿಸಬೇಡಿ, ಸರ್ಕಾರ ಅವರ ಚಿಕಿತ್ಸೆಗೆ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಭರವಸೆ ಕೊಟ್ಟಿದ್ದರು.

ಪಂತ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಯ ಕುರಿತು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಂತ್ ಅವರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ, ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತಿದೆ ಎಂದು ಚಿಕಿತ್ಸೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಮೆಕ್ಸಿಕೊ : ಜೈಲಿನ ಮೇಲೆ ದಾಳಿ – 14 ಮಂದಿ ದಾರುಣ ಸಾವು, 24 ಖೈದಿಗಳು ಪರಾರಿ – Vishwanews24
