ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

Featured, ರಾಜ್ಯ ನ್ಯೂಸ್

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ

ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ  ತಾಲೂಕಿನ ಕಡ್ಲೆ ಸಮುದ್ರ ತೀರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಪುಣೆ ಮೂಲದ ಐಟಿ ಕಂಪನಿಯ ಉದ್ಯೋಗಿ ಜೀವನ್ ಭಟ್ಟರಾಯಿ (26) ರೀಲ್ಸ್ ಮಾಡಲು ಹೋಗಿ ಸಮುದ್ರದಲ್ಲಿ ಕಾಣೆಯಾಗಿದ್ದಾರೆ.

ಇದನ್ನೂ ಓದಿ: 

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ಐದು ಜನ ಸ್ನೇಹಿತರೊಂದಿಗೆ ಕುಮಟಾ ಭಾಗಕ್ಕೆ ಪ್ರವಾಸ ಬಂದಿದ್ದ ಯುವಕ ಖಾಸಗಿ ರೆಸಾರ್ಟ್ನಲ್ಲಿ ಮೂರು ದಿನದಿಂದ ತಂಗಿದ್ದರು. ಇಂದು ಚಕ್ ಔಟ್ ಮಾಡಬೇಕಿದ್ದ ಯುವಕ ಸ್ಬೇಹಿತರ ಜೊತೆ ಕಡ್ಲೆ ಸಮುದ್ರತೀರದಲ್ಲಿ ರೀಲ್ಸ್ ಮಾಡಲು ಹೋಗಿದ್ದಾರೆ. ಈ ವೇಳೆ ಜೀವನ್ ಸಮುದ್ರದಲ್ಲಿ ಇಳಿದಾಗ ಅಲೆಗಳ ಹೊಡೆತಕ್ಕೆ ಕೊಚ್ಚಿಹೋಗಿದ್ದಾನೆ.

ಇದನ್ನೂ ಓದಿ: 

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಇನ್ನು ಕರಾವಳಿ ಕಾವಲುಪಡೆ, ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದು, ಈವರೆಗೂ ಜೀವನ್ ಪತ್ತೆಯಾಗಿಲ್ಲ. ಘಟನೆ ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply