ರೇಣುಕಾಸ್ವಾಮಿ ಕೊಲೆ ಪ್ರಕರಣ : ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ವಿಜಯಲಕ್ಷ್ಮೀ – vishwanews24

Featured, ರಾಜ್ಯ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ : ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ವಿಜಯಲಕ್ಷ್ಮೀ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆ ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

ತನ್ನ ಹಾಗೂ ಮಗ, ಪತಿ ದರ್ಶನ್ ಬಗ್ಗೆ ಕಪೋಲಕಲ್ಪಿತ ಸುದ್ದಿ ಪ್ರಸಾರ ಮಾಡಬಾರದು ಎಂದು ವಿಜಯಲಕ್ಷ್ಮೀ ಅವರು ತಡೆಯಾಜ್ಞೆ ತಂದಿದ್ದಾರೆ. ಇನ್ನು ರೇಣುಕಾಸ್ವಾಮಿ ಸಾವಿಗೆ ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.

 

ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ವಿಜಯಲಕ್ಷ್ಮೀ ಅವರು, ರೇಣುಕಾಸ್ವಾಮಿ ಸಾವಿಗೆ ನಾನು ಸಂತಾಪ ವ್ಯಕ್ತಪಡಿಸುತ್ತೇನೆ. ಕಳೆದ ಕೆಲ ದಿನಗಳಿಂದ ದರ್ಶನ್, ನಾನು, ನನ್ನ ಮಗ ಮತ್ತು ದರ್ಶನ್ ಅವರ ಎಲ್ಲಾ ಸ್ನೇಹಿತರು, ಕುಟುಂಬ ಮತ್ತು ಅಭಿಮಾನಿಗಳು ದುಃಖದಲ್ಲಿದ್ದೇವೆ. ನ್ಯಾಯಾಲಯವು ತಡೆಯಾಜ್ಞೆ ನೀಡಿದ್ದು, ಪ್ರಕರಣದಲ್ಲಿ ವಿವಿಧ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದ್ದ ಕೆಲ ಸುಳ್ಳು ಮಾಹಿತಿ ಮತ್ತು ಅಸತ್ಯಗಳಿಂದ ಜನರು ವಿಶ್ರಾಂತಿ ಪಡೆಯುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಅಭಿವೃದ್ಧಿ ಕೆಲಸದಲ್ಲಿ ಸೋತಿದೆ , ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೂಡಾ ಹದಗೆಟ್ಟಿದೆ : ಪ್ರಮೋದ್ ಮಧ್ವರಾಜ್ – vishwanews24

ಅಧಿಕಾರಿಗಳು ನೀಡುವ ಅಧಿಕೃತ ಮಾಹಿತಿಯನ್ನಷ್ಟೇ ಪ್ರಕಟಿಸಲು ನಾನು ಪ್ರತಿಯೊಬ್ಬರನ್ನೂ ಕೋರುತ್ತೇನೆ. ತಾಯಿ ಚಾಮುಂಡೇಶ್ವರಿ ಮತ್ತು ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯವು ಜಯ ಸಾಧಿಸಲಿ. ಸತ್ಯಮೇವ ಜಯತೇ ಎಂದು ಪೋಸ್ಟ್ ಮಾಡಿದ್ದಾರೆ.

Leave a Reply