ರೇಣುಕಾಸ್ವಾಮಿ ಸಾವಿಗೆ ನ್ಯಾಯ ಸಿಗಲಿದೆ : ನಟಿ ರಮ್ಯಾ ವಿಶ್ವಾಸ – vishwanews24

Featured, ರಾಜ್ಯ ನ್ಯೂಸ್

ರೇಣುಕಾಸ್ವಾಮಿ ಸಾವಿಗೆ ನ್ಯಾಯ ಸಿಗಲಿದೆ : ನಟಿ ರಮ್ಯಾ ವಿಶ್ವಾಸ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ ತೂಗುದೀಪ ಅವರಿಗೆ ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್​ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್​ ತೀರ್ಪನ್ನು ಕಾಯ್ದಿರಿಸಿದೆ.

ಇದರ ಬೆನ್ನಲೇ, ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಸ್ಯಾಂಡಲ್​ವುಡ್ ಕ್ವೀನ್ ಖ್ಯಾತಿಯ ರಮ್ಯಾ, ಮೃತ ರೇಣುಕಾಸ್ವಾಮಿ ಸಾವಿಗೆ ನ್ಯಾಯ ಸಿಗಲಿದೆ ಎಂದು ಸೋಷಿಯಲ್ ಮೀಡಿಯಾ ಪೋಸ್ಟ್​ ಮೂಲಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಟಿ ರಮ್ಯಾ ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ”ಭಾರತದ ಸಾಮಾನ್ಯ ಜನರಿಗೆ ಸುಪ್ರೀಂ ಕೋರ್ಟ್ ಆಶಾಕಿರಣ – ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ” ಎಂದು ಬರೆದುಕೊಂಡಿದ್ದಾರೆ.

2024ರಲ್ಲಿ ನಟ ದರ್ಶನ್​ ಸೇರಿ ಹಲವು ಜನಪ್ರಿಯ ವ್ಯಕ್ತಿಗಳ ವಿರುದ್ಧ ಕೆಲ ಆರೋಪಗಳು ಕೇಳಿಬಂದಿದ್ದವು. ಆ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ್ದ ನಟಿ ರಮ್ಯಾ, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ನೀವು ಹೋಗಿ ಜನರಿಗೆ ಹೊಡೆದು ಅವರನ್ನು ಸಾಯಿಸಲು ಆಗುವುದಿಲ್ಲ. ಕಾನೂನಿನ ಮೂಲಕ ಹೋಗಬೇಕಿದೆ. ಪೊಲೀಸ್ ಅಧಿಕಾರಿಗಳ ಮೇಲೆ ಅಪಾರ ಗೌರವ ಹೊಂದಿದ್ದೇನೆ. ಜನರು ಕಾನೂನಿನ ಮೇಲೆ ಇಟ್ಟಿರುವ ನಂಬಿಕೆಯನ್ನು ಪೊಲೀಸರು ಉಳಿಸುತ್ತಾರೆಂದು ನಂಬಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ಮಂಗಳೂರು: ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೆ : ಸ್ಪೀಕರ್ ಯು.ಟಿ. ಖಾದರ್ – vishwanews24

Leave a Reply