ರೇಷನ್ ಕಾರ್ಡ್ದಾರರಿಗೆ ಗುಡ್ ನ್ಯೂಸ್: ಇ-ಕೆವೈಸಿ ಗಡುವು ನ. 10ರವರೆಗೆ ವಿಸ್ತರಣೆ – vishwanews24
ರೇಷನ್ ಕಾರ್ಡ್ದಾರರ ಗಮನಕ್ಕೆ: ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಗಡುವು ನ.10 ರವರೆಗೆ ವಿಸ್ತರಣೆ
ಬೆಂಗಳೂರು: ಪಡಿತರ ಚೀಟಿ ಫಲಾನುಭವಿಗಳು ಇ-ಕೆವೈಸಿ ದೃಢೀಕರಿಸುವ ದಿನಾಂಕವನ್ನು ನವೆಂಬರ್ 10 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಇ-ಕೆವೈಸಿ ದೃಢೀಕರಿಸಲು ಅಕ್ಟೋಬರ್ 20 ಕೊನೆಯ ದಿನಾಂಕವಾಗಿತ್ತು.
ಪಡಿತರ ಇ-ಕೆವೈಸಿ ಗಡುವು ವಿಸ್ತರಣೆ
ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಒಂದು ವರ್ಷಕ್ಕೂ ಮೇಲ್ಪಟ್ಟು ಇ-ಕೆವೈಸಿ ಮಾಡಿಸಿದ 1,15,87,298 ಫಲಾನುಭವಿಗಳು ಮತ್ತೊಮ್ಮೆ ಇ-ಕೆವೈಸಿ ಮಾಡಬೇಕೆಂದು ಆದೇಶಿಸಿರುವ ಹಿನ್ನೆಲೆಯಲ್ಲಿ ಕೊನೆಯ ದಿನಾಂಕವನ್ನು ನವೆಂಬರ್ 10ರವರೆಗೆ ವಿಸ್ತರಿಸಲಾಗಿದೆ.
ಮಂಗಳೂರು ದಸರಾ ಮೆರವಣಿಗೆ: ಅ. 21ರಂದು ವಾಹನ ಸಂಚಾರ ಮಾರ್ಗ ಬದಲಾವಣೆ – vishwanews24
ರಾಜ್ಯದಲ್ಲಿ ಒಂದು ವರ್ಷದ ಹಿಂದೆ ಇ-ಕೆವೈಸಿ ಮಾಡಿಸಿದ ಫಲಾನುಭವಿಗಳ ಜತೆಗೆ, ಇದುವರೆಗೆ ಒಂದು ಬಾರಿಯೂ ಇ-ಕೆವೈಸಿ ಮಾಡಿಸದ 3,82,362 ಹಾಗೂ ಐದು ವರ್ಷ ಮೇಲ್ಪಟ್ಟು ಇ-ಕೆವೈಸಿ ಮಾಡಿಸಿದ 54,27,396 ಫಲಾನುಭವಿಗಳು ಇನ್ನೂ ಇ-ಕೆವೈಸಿ ದೃಢೀಕರಿಸಬೇಕಿದೆ. ಹೀಗಾಗಿ, ಇ-ಕೆವೈಸಿ ದಿನಾಂಕವನ್ನು ವಿಸ್ತರಿಸಲಾಗಿದೆ.
ಎಲ್ಲ ಫಲಾನುಭವಿಗಳು’ಅನ್ನ ಸೇವೆ’ ಮೊಬೈಲ್ ಅಪ್ಲಿಕೇಶನ್ ಮೂಲಕ ಖುದ್ದಾಗಿ ಅಥವಾ ನ್ಯಾಯಬೆಲೆ ಅಂಗಡಿಗಳಲ್ಲಿ ತಂತ್ರಾಂಶದ ಮೂಲಕ ನವೆಂಬರ್ 10 ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಇಲ್ಲವಾದಲ್ಲಿ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
ಸ್ಟಿಂಗ್ ಆಪರೇಷನ್ ಕರ್ನಾಟಕ ರಾಜ್ಯಕ್ಕೆ ಕಪ್ಪು ಚುಕ್ಕೆ : ಕೇಂದ್ರ ಸಚಿವ ಶೋಭಾ ಕರಂದ್ಲಾಜೆ – vishwanews24
‘ಅನ್ನ ಸೇವೆ’ ಆ್ಯಪ್ ಈಗ ದೇಶಾದ್ಯಂತ ಲಭ್ಯ
ಹೊರ ರಾಜ್ಯಗಳಿಗೆ ಕೆಲಸಕ್ಕೆಂದು ಹೋಗಿರುವ ರಾಜ್ಯದ ಪಡಿತರ ಚೀಟಿದಾರಿಗೆ ಅನುಕೂಲ ಕಲ್ಪಿಸಲು, ‘ಅನ್ನ ಸೇವೆ’ ಆ್ಯಪ್ನ ಲಭ್ಯತೆಯನ್ನು ಇದೀಗ ದೇಶಾದ್ಯಂತ ವಿಸ್ತರಿಸಲಾಗಿದೆ. ಹೊರರಾಜ್ಯಗಳಲ್ಲಿರುವ ರಾಜ್ಯದ ಪಡಿತರ ಚೀಟಿದಾರರು ಅವರಿದ್ದಲಿಂದಲೇ ಆ್ಯಪ್ ಡೌನಲೋಡ್ ಮಾಡಿಕೊಂಡು ಇ-ಕೆವೈಸಿ ಪೂರ್ಣಗೊಳಿಸುವಂತೆ ಇಲಾಖೆ ಮನವಿ ಮಾಡಿಕೊಂಡಿದೆ. ಅನ್ನ ಸೇವೆ ಆ್ಯಪ್ನ ಅಪ್ಡೇಟ್ ಕೂಡ ಗೂಗಲ್ ಪ್ಲೇ ಸ್ಟೋರ್ನಲ್ಲಿ ಲಭ್ಯವಿದ್ದು, ಈಗಾಗಲೇ ತಮ್ಮ ಮೊಬೈಲ್ನಲ್ಲಿ ಆ್ಯಪ್ ಡೌನ್ಲೋಡ್ ಮಾಡಿಕೊಂಡಿರುವವರು ಅಪ್ಡೇಟ್ ಮಾಡಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
