ರೈತ ಮುಖಂಡರು ರಸ್ತೆಯಲ್ಲಿ ನಿಂತು ಹೋರಾಟ ಮಾಡುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ : ಶೋಭಾ ಕರಂದ್ಲಾಜೆ – Vishwanews24
ರೈತ ಮುಖಂಡರು ರಸ್ತೆಯಲ್ಲಿ ನಿಂತು ಹೋರಾಟ ಮಾಡುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ : ಶೋಭಾ ಕರಂದ್ಲಾಜೆ – Vishwanews24
ಚರ್ಚೆಗೆ ಬಂದರೆ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಸಿದ್ಧ..
ಹಾಸನ: ‘ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಹಲವು ತಿಂಗಳಿಂದ ಹೋರಾಟ ನಡೆಸುತ್ತಿರುವ ರೈತ ಮುಖಂಡರು ಚರ್ಚೆಗೆ ಬಂದರೆ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಸಿದ್ಧ’ ಎಂದು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ನಗರದಲ್ಲಿ ಮಂಗಳವಾರ ಹಾಸನಾಂಬಾ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ರೈತ ಮುಖಂಡರೊಂದಿಗೆ 11 ಸುತ್ತಿನ ಮಾತುಕತೆ ನಡೆಸಿದೆ. ಆದರೆ, ಇದುವರೆಗೂ ಸಮಸ್ಯೆ ಬಗೆಹರಿದಿಲ್ಲ. ಈಗಲೂ ಅವರ ಜೊತೆಗೆ ಮಾತುಕತೆ ಮಾಡಲು ಸರ್ಕಾರ ಸಿದ್ಧ. ರಸ್ತೆಯಲ್ಲಿ ನಿಂತು ಹೋರಾಟ ಮಾಡುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ. ಸರ್ಕಾರದೊಂದಿಗೆ ಕುಳಿತು ಚರ್ಚೆ ನಡೆಸಿದರೆ ರೈತರ ಸಮಸ್ಯೆಗೆ ತಾತ್ವಿಕ ಅಂತ್ಯ ಕಾಣಿಸಬಹುದು. ಈ ನಿಟ್ಟಿನಲ್ಲಿ ರೈತ ಮುಖಂಡರು ಮಾತುಕತೆಗೆ ಬಂದರೆ ಒಳಿತು’ ಎಂದು ಸಲಹೆ ನೀಡಿದರು.
ನಾಳೆಯಿಂದ ಸಾರ್ವಜನಿಕರಿಗೆ ಪುನೀತ್ ರಾಜ್ಕುಮಾರ್ ‘ಸಮಾಧಿ ದರ್ಶನ’ಕ್ಕೆ ಅವಕಾಶ – Vishwanews24
