ಲಸಿಕೆ ಪಡೆದ ಬಳಿಕ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಕೋವಿಡ್ ಪಾಸಿಟಿವ್ -Vishwanews24
ಲಸಿಕೆ ಪಡೆದ ಬಳಿಕ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಗೆ ಕೋವಿಡ್ ಪಾಸಿಟಿವ್ -Vishwanews24
ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಕೋವಿಡ್ 19 ಲಸಿಕೆ ತೆಗೆದುಕೊಂಡ ಎರಡು ದಿನದ ನಂತರ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿರುವುದಾಗಿ ಮೂಲಗಳು ತಿಳಿಸಿವೆ.
ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಇಮ್ರಾನ್ ಖಾನ್ ನಿವಾಸದಲ್ಲಿ ಸ್ವಯಂ ಐಸೊಲೇಷನ್ ಗೆ ಒಳಗಾಗಿರುವುದಾಗಿ ಸಚಿವ ಫೈಸಲ್ ಸುಲ್ತಾನ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
PM Imran Khan has tested positive for Covid-19 and is self isolating at home
— Faisal Sultan (@fslsltn) March 20, 2021
ಇಮ್ರಾನ್ ಖಾನ್ ಶುಕ್ರವಾರ ಮೊದಲ ಲಸಿಕೆ ಪಡೆದಿದ್ದು, ದೇಶದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಪೂರ್ಣಪ್ರಮಾಣದಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸುವಂತೆ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
ಪಾಕಿಸ್ತಾನದಲ್ಲಿ ಮೊದಲ ಹಂತದ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭಗೊಂಡಿದ್ದು, ಇಮ್ರಾನ್ ಖಾನ್ (67) ಕೂಡಾ ರೋಗಪ್ರತಿನಿರೋಧಕ ಹೆಚ್ಚಿಸಿಕೊಳ್ಳಲು ಲಸಿಕೆ ಪಡೆದಿರುವುದಾಗಿ ವರದಿ ವಿವರಿಸಿದೆ.
ಇದನ್ನೂ ಓದಿ : RSS ನ ಪ್ರಧಾನ ಕಾರ್ಯದರ್ಶಿಯಾಗಿ ಕನ್ನಡಿಗ ದತ್ತಾತ್ರೇಯ ಹೊಸಬಾಳೆ ಆಯ್ಕೆ -Vishwanews24
