ಲೈಂಗಿಕ ದೌರ್ಜನ್ಯ ಪ್ರಕರಣ : ಪ್ರಜ್ವಲ್ ರೇವಣ್ಣಗೆ ಜೂ.24ರ ವರೆಗೆ ನ್ಯಾಯಾಂಗ ಬಂಧನ -vishwanews24
ಲೈಂಗಿಕ ದೌರ್ಜನ್ಯ ಪ್ರಕರಣ : ಪ್ರಜ್ವಲ್ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ
ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ (ಎಸ್ಐಟಿ) ವಶದಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿದೆ.
ಪ್ರಜ್ವಲ್ ರೇವಣ್ಣ ಅವರ ಎಸ್ ಐಟಿ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರು 42ನೇ ಎಸಿಎಂಎಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ ಐಟಿ ಪೊಲೀಸರು ಇಂದು ಹಾಜರುಪಡಿಸಿದರು.
ಯುವರಾಜ್ಕುಮಾರ್ ಡಿವೋರ್ಸ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ – vishwanews24
ಈ ವೇಳೆ ಎಸ್ ಐಟಿ ಪೊಲೀಸರು ಪ್ರಜ್ವಲ್ ರೇವಣ್ಣರ ವಿಚಾರಣೆ ಮುಗಿದಿರುವ ಬಗ್ಗೆ ಮಾಹಿತಿ ನೀಡಿದ್ದು, ತಮ್ಮ ಕಸ್ಟಡಿಗೆ ಅವಶ್ಯಕತೆ ಇಲ್ಲವೆಂದ ಕೋರ್ಟ್ ಗಮನಕ್ಕೆ ತಂದರು. ಇದೇ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲರು ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಮನವಿ ಮಾಡಿದರು. ವಾದ- ಪ್ರತಿವಾದ ಆಲಿಸಿದ ಕೋರ್ಟ್ ಜೂ.24ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಆ ಮೂಲಕ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
