ಲೋಕಸಭಾ ಚುನಾವಣೆ :ಉಡುಪಿ-ಚಿಕ್ಕಮಗಳೂರು ಜೆಡಿಎಸ್ ವಶಕ್ಕೆ; ಬಿಜೆಪಿ ಮುಂದೆ ಮಂಡಿಯೂರಿತೆ ಕಾಂಗ್ರೆಸ್…? – Vishwanews24

Featured, ಉಡುಪಿ

ಉಡುಪಿ: ಲೋಕಸಭೆ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಭಾರೀ ಗೊಂದಲಕ್ಕೀಡಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ಸೀಟು ಹಂಚಿಕೆ ವಿಚಾರ ಕೊನೆಗೂ ಬಗೆಹರಿದಿದೆ. ಕಾಂಗ್ರೆಸ್ ಹಾಲಿ ಸಂಸದರಿರುವ ತುಮಕೂರು ಕ್ಷೇತ್ರ ಸೇರಿದಂತೆ 8 ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ.

ಉತ್ತರ ಕನ್ನಡ, ಉಡುಪಿ -ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ಉತ್ತರ, ವಿಜಯಪುರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗಿದೆ.
ಮೈಸೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳನ್ನು ಕಾಂಗ್ರೆಸ್ ಉಳಿಸಿಕೊಂಡಿದೆ. ಜೆಡಿಎಸ್ 8 ಕ್ಷೇತ್ರ ಹಾಗೂ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ.

ಕಾಂಗ್ರೆಸ್ ಜೆಡಿಎಸ್ ಮೈತ್ರಿಯಲ್ಲಿ ಇದೀಗ ಎಂಟು ಸ್ಥಾನಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗಿದೆ. ಇದರಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರ ಕೂಡ ಸೇರಿದೆ. ಜೆಡಿಎಸ್ ದುರ್ಬಲವಾಗಿರುವ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿರುವುದು ಹಾಸ್ಯಾಸ್ಪದವೆಂದು ಕಾಂಗ್ರೆಸ್ ಕಾರ್ಯಕರ್ತರು ಮಾತಡತೊಡಗಿದ್ದಾರೆ.

ಬಿಜೆಪಿಯಲ್ಲಿ ‌ಸಂಸದೆ ಶೋಭಾ ಕರಂದ್ಲಾಜೆ ಬಹುತೇಕ ಫೈನಲ್ ಆಗಿದ್ದು ಈ ಬಾರಿ ಅಂತರಿಕ ವಿರೋಧಕ್ಕೆ ಒಳಗಾಗಿದ್ದ ಅವರು ಕಾಂಗ್ರೆಸ್ ನಿಂದ ಬಿಗ್ ಫೈಟ್ ನಿರೀಕ್ಷಿಸಲಾಗಿತ್ತು. ಆದರೆ ಮೈತ್ರಿ ಎಲ್ಲೊ ಕಾಂಗ್ರೆಸ್ ಗೆ ಕೈ ಕೊಟ್ಟಿದ್ದು, ಚುನಾವಣೆ ಮುಂಚೆಯೇ ಉಡುಪಿ ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ಗೆ ಬಿಟ್ಟು ಕೊಟ್ಟು ಸೋಲೊಪ್ಪಿಕೊಂಡಂತಾಗಿದೆ ಎಂದು ಕಾರ್ಯಕರ್ತರು ಮಾತಾಡಿಕೊಳ್ಳಲು ಆರಂಭಿಸಿದ್ದಾರೆ.

ಕಾಂಗ್ರೆಸ್ ಪ್ರಾಬಲ್ಯವಿರುವ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್ ಪಾಲಾಗಿದೆ. ಆದರೆ ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಯಾರು ಕಣಕ್ಕಿಯುತ್ತಾರೆ ಎಂಬುವುದು ಬಹಳಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಬಿಜೆಪಿ ಟಿಕೆಟ್ ಕೈತಪ್ಪಿದರೆ ಕೆ. ಜಯಪ್ರಕಾಶ್ ಹೆಗ್ಡೆ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ನ ಅಮೃತ್ ಶೆಣೈ ಈಗಾಗಲೇ ಹೈಕಮಾಂಡ್ ವಿರುದ್ಧ ತೀವ್ರ ಅಸಮಾಧಾನ ಗೊಂಡಿದ್ದು, ನಿರ್ಧಾರ ಬದಲಾಯಿಸದಿದ್ದರೆ ಪಕ್ಷೇತರನಾಗಿ ನಿಲ್ಲುವ ಬಗ್ಗೆ ಹೇಳಿಕೊಂಡಿದ್ದಾರೆ!