ಲೋಕಸಭಾ ಚುನಾವಣೆ: ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ, ಅಮೇಥಿಯಿಂದ ಕಿಶೋರಿ ಲಾಲ್‌ ಶರ್ಮಾ ಸ್ಪರ್ಧೆ – Vishwanews24

Featured, ರಾಷ್ಟ್ರ ನ್ಯೂಸ್

ಲೋಕಸಭಾ ಚುನಾವಣೆ: ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ, ಅಮೇಥಿಯಿಂದ ಕಿಶೋರಿ ಲಾಲ್‌ ಶರ್ಮಾ ಸ್ಪರ್ಧೆ

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ಮತ್ತೊಂದು ಪಟ್ಟಿ ಬಿಡುಗಡೆಯಾಗಿದೆ. ಉತ್ತರ ಪ್ರದೇಶದ ರಾಯ್‌ ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಸ್ಪರ್ಧಿಸಲಿದ್ದು, ಅಮೇಥಿ ಕ್ಷೇತ್ರದಿಂದ ಕಿಶೋರಿ ಲಾಲ್‌ ಶರ್ಮಾ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಿರುವ ರಾಹುಲ್ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿಯಿಂದ ತೆರವಾದ ರಾಯ್‌ ಬರೇಲಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. 2019ರ ಚುನಾವಣೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಅವರು ಈ ಕ್ಷೇತ್ರದಿಂದ ಸೋತಿದ್ದರು.

ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್.ಡಿ.ರೇವಣ್ಣ – Vishwanews24

Leave a Reply