ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ : ಇಂದು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗಕ್ಕೆ ಪ್ರಧಾನಿ ಭೇಟಿ – Vishwanews24

Featured, ರಾಜ್ಯ ನ್ಯೂಸ್

ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ : ಇಂದು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗಕ್ಕೆ ಪ್ರಧಾನಿ ಭೇಟಿ

ಶಿವಮೊಗ್ಗ: ಇಂದು ಪ್ರಧಾನಿ ನರೇಂದ್ರ ಮೋದಿ ಮಲೆನಾಡು ಶಿವಮೊಗ್ಗಕ್ಕೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ನಗರ ಪೂರ್ತಿ ಕಮಲಮಯವಾಗಿದೆ.

ಕೇರಳದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಅಪರಾಹ್ನ 1:30ಕ್ಕೆ ಶಿವಮೊಗ್ಗದ ಏರ್​ಪೋರ್ಟ್​ಗೆ ಬಂದಿಳಿಯಲಿದ್ದು ಅಲ್ಲಿಂದ ಅಲ್ಲಮಪ್ರಭು ಮೈದಾನದವರೆಗೆ ಸುಮಾರು 14 ಕಿ.ಮೀ ಜಿರೋ ಟ್ರಾಫಿಕ್​ನಲ್ಲಿ ಆಗಮಿಸಲಿದ್ದಾರೆ. ಸಮಾವೇಶದಲ್ಲಿ 2 ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ ಇದೆ. ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಪೂರ್ತಿ ಖಾಕಿ ಸರ್ಪಗಾವಲು ಹಾಕಲಾಗಿದೆ. ಜೊತೆಗೆ ಆಯಾಕಟ್ಟಿ ಪ್ರದೇಶಗಳಲ್ಲಿ ಕ್ಷೀಪ್ರ ಕಾರ್ಯಾಚರಣೆ ಪಡೆ, ಅರೆ ಸೇನಾ ಪಡೆಯನ್ನು ನಿಯೋಜಿಸಲಾಗಿದೆ.

ಉಡುಪಿ: ಮಾಜಿ ಶಾಸಕ ರಘುಪತಿ ಭಟ್ ಅಕ್ರಮ ರೆಸಾರ್ಟ್ ನಿರ್ಮಾಣ ಆರೋಪ – Vishwanews24

ಮೋದಿ ಆಗಮನ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳು ಕೆಲಕಾಲ ಜಿರೋ ಟ್ರಾಫಿಕ್​ಗಾಗಿ ಬಂದ್ ಆಗಲಿವೆ. ಪ್ರಧಾನಿ ಮೋದಿ ಶಿವಮೊಗ್ಗದಲ್ಲಿ 2.5 ಲಕ್ಷಕ್ಕೂ ಅಧಿಕ ಜನರನ್ನುದ್ದೇಶಿಸಿ ಚುನಾವಣಾ ಭಾಷಣ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿಯ ಮುಖ್ಯ ಸಚೇತಕ ಎನ್ ರವಿ ಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ, ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ, ದಾವಣಗೆರೆಯ ಸಂಸದ ಸಿದ್ದೇಶ್ವರ್, ಗಾಯತ್ರಿ ಸಿದ್ದೇಶ್ವರ್, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರಿನ ಅಭ್ಯರ್ಥಿ ಬ್ರಜೇಶ್ ಚೌಟ. ಶಾಸಕರು, ಮಾಜಿ ಶಾಸಕರುಗಳು, ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಆರಗ ಜ್ಞಾನೇಂದ್ರ ಸೇರಿದಂತೆ ಇತರರು ವೇದಿಕೆ ಮೇಲೆ ಇರಲಿದ್ದಾರೆ .

420 ಇರೋರು 400 ಸೀಟು ಗೆಲ್ಲುವ ದುರಹಂಕಾರದ ಮಾತಾಡ್ತಾರೆ: ಮೋದಿ ವಿರುದ್ಧ ಪ್ರಕಾಶ್ ರೈ ವಾಗ್ದಾಳಿ – Vishwanews24

Leave a Reply