ವಾಣಿಜ್ಯ ಸಿಲಿಂಡರ್ ಬೆಲೆ 200ರೂ. ಇಳಿಕೆ – vishwanews24
ವಾಣಿಜ್ಯ ಸಿಲಿಂಡರ್ ಬೆಲೆ 200ರೂ. ಇಳಿಕೆ
ನವದೆಹಲಿ: ಬಹುದಿನಗಳ ಬಳಿಕ ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಗುಡ್ನ್ಯೂಸ್ ಸಿಕ್ಕಿದೆ. ಬೆಂಗಳೂರು, ದೆಹಲಿ, ಕೋಲ್ಕತ್ತಾ ಸೇರಿದಂತೆ ಹಲವು ಮಹಾನಗರಗಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 200 ರೂ.ಗಳಷ್ಟು ಇಳಿಕೆಯಾಗಿದೆ.
ಇಂದು ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 209, ದೆಹಲಿಯಲ್ಲಿ 202 ರೂ.ಗಳಷ್ಟು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 200 ರೂ. ಇಳಿಕೆಯಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.
