ವಾಯುಭಾರ ಕುಸಿತ : ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ ; ಯೆಲ್ಲೊ ಅಲರ್ಟ್ ಘೋಷಣೆ – vishwanews24
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರಾವಳಿಯಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ
ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಎದ್ದ ಫೆಂಗಲ್ ಚಂಡ ಮಾರುತದಿಂದ ಉಂಟಾದ ಅನಾಹುತಗಳಿಂದ ಇನ್ನೂ ಚೇತರಿಕೊಳ್ಳುತ್ತಿರುವಾಗಲೇ ಇದೀಗ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದ್ದು, ಗುರುವಾರ ಹಾಗೂ ಶುಕ್ರವಾರ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನಲೆ ಗುರುವಾರದಿಂದ ರಾಜ್ಯದಲ್ಲಿ ಕೆಲವು ಭಾಗಗಳಲ್ಲಿ ಭಾರೀ ಮಳೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳೂರು – ಕಾರ್ಕಳ ಮಾರ್ಗದಲ್ಲಿ KSRTC ಪ್ರಾಯೋಗಿಕ ಸಂಚಾರ ಆರಂಭ – vishwanews24
ಚಿತ್ರದುರ್ಗ, ತುಮಕೂರು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಗುರುವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಶುಕ್ರವಾರವು ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಇಲಾಖೆಯು ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಇದರಿಂದಾಗಿ ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಶನಿವಾರವೂ ರಾಜ್ಯದ ವಿವಿಧೆಡೆ ಮಳೆ ಮುಂದುವರಿಯುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಸೋಮೇಶ್ವರ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಸಮುದ್ರ ತೀರದಲ್ಲಿ ಪತ್ತೆ – vishwanews24
