ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ : ಮುರುಘಾ ಶ್ರೀಗಳಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ – Vishwanews24

Featured, ರಾಜ್ಯ ನ್ಯೂಸ್

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ : ಮುರುಘಾ ಶ್ರೀಗಳಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮೊದಲನೇ ಆರೋಪಿ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಬಿ ಕೆ ಕೋಮಲ ಅವರು ಸೆ.14ರವರೆಗೆ ಶ್ರೀಗಳಿಗೆ ನ್ಯಾಯಾಂಗ ಬಂಧನ ಅದೇಶ ನೀಡಿದ್ದಾರೆ.

ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಮಠದ ಅಕ್ಕಮಹಾದೇವಿ ಹಾಸ್ಟೆಲ್‌ ವಾರ್ಡನ್‌ ರಶ್ಮಿ ಅವರನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಈ ನಡುವೆ ಶ್ರೀಗಳು ಸಲ್ಲಿಸಿದ್ದ ಜಾಮೀನು ಅರ್ಜಿ ಕೋರ್ಟ್ ತಿರಸ್ಕರಿಸಿದೆ.

ಉಡುಪಿ: ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು – Vishwanews24

Leave a Reply