ವಿಧಾನ ಪರಿಷತ್ ಚುನಾವಣೆ: ಜೆಡಿಎಸ್‌ ಅಭ್ಯರ್ಥಿಯಾಗಿ ಟಿ.ಎ ಶರವಣ ನಾಮಪತ್ರ ಸಲ್ಲಿಕೆ – Vishwanews24

Featured, ರಾಜ್ಯ ನ್ಯೂಸ್

ವಿಧಾನ ಪರಿಷತ್ ಚುನಾವಣೆ: ಜೆಡಿಎಸ್‌ ಅಭ್ಯರ್ಥಿಯಾಗಿ ಟಿ.ಎ ಶರವಣ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ ಶರವಣ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆಯ ಬಳಿಕ ಅಭ್ಯರ್ಥಿ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಬಳಿಕ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರ ಜೊತೆಗೆ ಶರವಣ ನಾಮಪತ್ರ ಸಲ್ಲಿಸಿದರು.

ಚುನಾವಣಾಧಿಕಾರಿ ವಿಧಾನಸಭೆ ಕಾರ್ಯದರ್ಶಿ ಎಂಕೆ ವಿಶಾಲಕ್ಷ್ಮಿ ಅವರ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಯ ಬಳಿಕ ಮಾತನಾಡಿದ ವಿಧಾನ ಪರಿಷತ್ ಜೆಡಿಎಸ್ ಅಭ್ಯರ್ಥಿ ಶರವಣ ಮಾತನಾಡಿ, ‌ಪಕ್ಷ ನಿಷ್ಠೆ ಗಮನ ಹರಿಸಿ ಎರಡನೇ ಬಾರಿ ವಿಧಾನಪರಿಷತ್ ನಲ್ಲಿ ಸೇವೆ ಸಲ್ಲಿಸಲು ಅವಕಾಶ ಕೊಟ್ಟಿದ್ದಾರೆ. ಇದಕ್ಕಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಎಚ್ ಡಿ ಕುಮಾರಸ್ವಾಮಿ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಮಂಗಳೂರು : ಜೂನ್ 1 ರಿಂದ ಮೀನುಗಾರಿಕೆಗೆ ತಾತ್ಕಾಲಿಕ ನಿಷೇಧ – Vishwanews24

ನಾನು ಸಣ್ಣ ಸಮಾಜದಿಂದ ಬಂದಿದ್ದೇನೆ. ಹಾಗಿದ್ದರೂ ಬೆಳೆಯಲು ಅವಕಾಶ ಕೊಟ್ಟಿದ್ದಾರೆ. ನನ್ನ ಜವಾಬ್ದಾರಿ ‌ಇನ್ನಷ್ಟು ಜಾಸ್ತಿಯಾಗಿದೆ. ಕುಮಾರಸ್ವಾಮಿ ಅವರನ್ನು ಮೂರನೇ ಬಾರಿಗೆ ಪಟ್ಟಾಭಿಷೇಕ ಆಗಬೇಕು‌. ಈ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.

ಬಿಜೆಪಿ ಹಾಗೂ ಕಾಂಗ್ರೆಸ್ ನ್ನು ಜನರು ತಿರಸ್ಕಾರ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಮಳೆಯಿಂದ ಜನರು ತೊಂದರೆ ಒಳಗಾಗುತ್ತಿದ್ದಾರೆ. ಸರ್ಕಾರ ಬಿಬಿಎಂಪಿ ಚುನಾವಣಾ ನಡೆಸದೆ ಅಧಿಕಾರಿಗಳ ಮೂಲಕ ಆಡಳಿತ ನಡೆಸಿ ದುರುಪಯೋಗ ಮಾಡುತ್ತಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ, ಜನರು ಇದನ್ನು ಪ್ರಶ್ನೆ ಮಾಡುತ್ತಿದ್ದಾರೆ . ಬಿಬಿಎಂಪಿ ಚುಕ್ಕಾಣಿ ಹಿಡಿಯಲು ಜೆಡಿಎಸ್ ಸಜ್ಜಾಗಿದೆ ಎಂದರು.

ವಿಜಯೇಂದ್ರಗೆ ನಿರಾಸೆ ಮೂಡಿಸಿದ ಬಿಜೆಪಿ ಪರಿಷತ್ ಅಭ್ಯರ್ಥಿಗಳ ಪಟ್ಟಿ – Vishwnaews24

Leave a Reply