ವಿಧಾನಪರಿಷತ್ ಚುನಾವಣೆಯಲ್ಲಿ ನಾವು ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ : ಯಡಿಯೂರಪ್ಪ ವಿಶ್ವಾಸ – Vishwanews24
ವಿಧಾನಪರಿಷತ್ ಚುನಾವಣೆಯಲ್ಲಿ ನಾವು ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ : ಯಡಿಯೂರಪ್ಪ ವಿಶ್ವಾಸ – Vishwanews24
ಕಾಂಗ್ರೆಸ್ನಲ್ಲಿ ಬಡಿದಾಟ ಶುರುವಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ..
ಹುಬ್ಬಳ್ಳಿ: ಕಾಂಗ್ರೆಸ್ನಲ್ಲಿ ಬಡಿದಾಟ ಶುರುವಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಜನಸ್ವರಾಜ ಯಾತ್ರೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನಸ್ವರಾಜ ಯಾತ್ರೆ ಹಿನ್ನೆಲೆಯಲ್ಲಿ 8 ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿರುವೆ. ಒಟ್ಟು ನಾಲ್ಕು ಭಾಗಗಳಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಒಂದು ಕಡೆ ನಳಿನ್ ಕುಮಾರ್ ಕಟೀಲ್, ಮತ್ತೊಂದು ಕಡೆ ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್ ಈ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದು ತಿಳಿಸಿದರು.
ವಿಧಾನಪರಿಷತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದು, ಬಹುಮತ ಪಡೆಯಬೇಕು ಎಂಬ ಅಪೇಕ್ಷೆ ಇದೆ. ಆ ದಿಕ್ಕಿನಲ್ಲಿ ನಾವು ಕೆಲಸ ಮಾಡುತ್ತೇವೆ. ನಾವು ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ನಾನು ಉತ್ತರ ಕನ್ನಡ ಮುಗಿಸಿ ಮತ್ತೆ ಹಾವೇರಿಗೆ ಹೋಗುತ್ತೇನೆ. ನಂತರ ಗದಗ, ಬಾಗಲಕೋಟೆ, ಬಿಜಾಪುರ, ಚಿಕ್ಕೋಡಿ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ನಾನು ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದರು.
ಕಾಂಗ್ರೆಸ್ ಎರಡು ಬಣವಾಗಿರುವ ಕುರಿತು ಮಾತನಾಡಿದ ಅವರು, ನಾನು ಸಾಮಾನ್ಯವಾಗಿ ಯಾವ ಪಕ್ಷದ ಬಗ್ಗೆಯೂ ಟೀಕೆ,ಟಿಪ್ಪಣಿಗಳನ್ನು ಮಾಡುವುದಿಲ್ಲ. ಕಾಂಗ್ರೆಸ್ ನಲ್ಲಿ ಬಡಿದಾಟ ಶುರುವಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಮುಂದೆ ನೋಡೋಣ ಎಂದು ತಿಳಿಸಿದರು.
ನ.22ರವರೆಗೆ ರಾಜ್ಯಾದ್ಯಂತ ಭಾರಿ ಮಳೆ : ಯೆಲ್ಲೋ ಅಲರ್ಟ್ ಘೋಷಣೆ – Vishwanews24
