ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆ : ಬಿಎಸ್ ಯಡಿಯೂರಪ್ಪ – Vishwanews24
ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆ : ಬಿಎಸ್ ಯಡಿಯೂರಪ್ಪ
ನವದೆಹಲಿ: ರಾಜ್ಯ ವಿಧಾನಮಂಡಲದ ಅಧಿವೇಶನ ಆರಂಭಕ್ಕೆ ಮುನ್ನವೇ ಬಿಜೆಪಿಯಿಂದ ವಿಧಾನಸಭೆ, ಪರಿಷತ್ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಇದಕ್ಕಾಗಿ ಇಂದು ಮಧ್ಯಾಹ್ನ ನಂತ್ರ ಶಾಸಕಾಂಗ ಪಕ್ಷದ ಸಭೆ ಕೂಡ ಕರೆಯಲಾಗುತ್ತದೆ ಎನ್ನಲಾಗಿತ್ತು. ಆದ್ರೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತ್ರ, ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಲಾಗಿದೆ ಎಂದಿದ್ದಾರೆ.
ಇಂದು ಈ ವಿಷಯವಾಗಿ ಮೊನ್ನೆ ದೆಹಲಿಗೆ ಬಿಜೆಪಿ ಹೈಕಮಾಂಡ್ ಜೊತೆಗೆ ಚರ್ಚಿಸುವುದಕ್ಕೆ ತೆರಳಿದ್ದರು. ನಿನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಕೇವಲ 8 ನಿಮಷಗಳ ಕಾಲ ಚರ್ಚಿಸಿದ್ದರು. ಈ ಬಳಿಕ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದಂತ ಮಾಜಿ ಸಿಎಂ ಬಿಎಸ್ ವೈ ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಮದುವೆಯಾಗಲು ಜಾತಿ ಬೇರೆ ಎಂದು ನಿರಾಕರಿಸಿದ ಪ್ರಿಯತಮ – ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ದುರ್ಮರಣ – Vishwanews24
ಇನ್ನೂ ನಾನು ಅಮಿತ್ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜೊತೆಗೆ ಸುದೀರ್ಘ ಚರ್ಚೆ ಮಾಡಲಾಗಿದೆ. ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಅಮಿತ್ ಶಾ ನಾಳೆ ತೀರ್ಮಾನ ಮಾಡುತ್ತಾರೆ. ನಾಳೆ ಎಲ್ಲವೂ ತೀರ್ಮಾನ ಆಗಲಿದೆ ಎಂಬುದಾಗಿ ತಿಳಿಸಿದ್ದಾರೆ.
ಈಗಾಗಲೇ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಆಡಳಿತ ಪಕ್ಷದ ಅನೇಕ ನಾಯಕರು ಬಿಜೆಪಿಯನ್ನು ಪ್ರತಿಪಕ್ಷ ನಾಯಕನ ಆಯ್ಕೆ ಮಾಡದ ಕುರಿತಾಗಿ ಟೀಕಿಸಿದ್ದರು. ಈ ಹಿನ್ನಲೆಯಲ್ಲಿ ಎರಡು ದಿನಗಳ ಹಿಂದೆ ನಡೆಯಬೇಕಿದ್ದಂತ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ ಮಾಡಲಾಗಿತ್ತು. ಇಂದು ಕೂಡ ನಡೆಯಲಿದೆ ಎನ್ನಲಾಗುತ್ತಿದ್ದಂತ ಸಭೆ ನಾಳೆಗೆ ಮುಂದೂಡಿಕೆಯಾಗಿದೆ.
ಮದುವೆಯಾಗಲು ಜಾತಿ ಬೇರೆ ಎಂದು ನಿರಾಕರಿಸಿದ ಪ್ರಿಯತಮ – ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ದುರ್ಮರಣ – Vishwanews24
