ವಿಶೇಷ ವಿಮಾನದಲ್ಲಿ ಉಮೇಶ್ ಕತ್ತಿ ಪಾರ್ಥಿವ ಶರೀರ ಬೆಳಗಾವಿಗೆ ಏರ್ ಲಿಫ್ಟ್ – Vishwanews24

Featured, ರಾಜ್ಯ ನ್ಯೂಸ್

ವಿಶೇಷ ವಿಮಾನದಲ್ಲಿ ಉಮೇಶ್ ಕತ್ತಿ ಪಾರ್ಥಿವ ಶರೀರ ಬೆಳಗಾವಿಗೆ ಏರ್ ಲಿಫ್ಟ್ ..

ಸಂಜೆ 5 ಗಂಟೆಗೆ ಸ್ವಗ್ರಾಮ ಬಾಗೇವಾಡಿಯಲ್ಲಿ ಅಂತ್ಯಕ್ರಿಯೆ..

ಬೆಂಗಳೂರು : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಬೆಳಗಾವಿಗೆ ಸಚಿವ ಉಮೇಶ್ ಕತ್ತಿ ಪಾರ್ಥಿವ ಶರೀರದ ಏರ್ ಲಿಫ್ಟ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದೀಗ ಬೆಂಗಳೂರಿನ ಹೆಚ್ ಎಎಲ್ ಗೆ ಹೈದರಾಬಾದ್ ನಿಂದ ವಿಶೇಷ ವಿಮಾನ ಆಗಮಿಸಿದ್ದು, ವಿಶೇಷ ವಿಮಾನದಲ್ಲಿ ಉಮೇಶ್ ಕತ್ತಿ ಪಾರ್ಥಿವ ಶರೀರ ಬೆಳಗಾವಿಗೆ ಏರ್ ಲಿಫ್ಟ್ ಮಾಡಲಾಗುವುದು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ಮಾಲಾಗುತ್ತಿದ್ದು, ಸಂಜೆ 5 ಗಂಟೆಗೆ ಸ್ವಗ್ರಾಮ ಬಾಗೇವಾಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಬಿಎಸ್ ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ – Vishwanews24

Leave a Reply