ವಿಶ್ವ ಯೋಗ ದಿನಾಚರಣೆ : ಜೂನ್ 21ರಂದು ಪ್ರಧಾನಿ ಮೋದಿ ಮೈಸೂರಿಗೆ – Vishwanews24

Featured, ರಾಜ್ಯ ನ್ಯೂಸ್

ವಿಶ್ವ ಯೋಗ ದಿನಾಚರಣೆ : ಜೂನ್ 21ರಂದು ಪ್ರಧಾನಿ ಮೋದಿ ಮೈಸೂರಿಗೆ

ಮೈಸೂರು: ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂನ್ 21ರಂದು ನಗರಕ್ಕೆ ಆಗಮಿಸುವುದು ಬಹುತೇಕ ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಯೋಗ ದಿನಾಚರಣೆಗಾಗಿ ಸ್ಥಳ ನಿರ್ಧಾರ ಇನ್ನೂ ಆಗಿಲ್ಲ.ರೇಸ್‌ಕೋರ್ಸ್‌, ಅರಮನೆ ಆವರಣ ಸೇರಿದಂತೆ ನಗರದಲ್ಲಿರುವ ಹಲವು ಸ್ಥಳಗಳನ್ನು ಪರಿಶೀಲಿಸಲಾಗುತ್ತಿದೆ. ಕೇಂದ್ರ ತಂಡವು ಸದ್ಯದಲ್ಲೇ ಅಂತಿಮಗೊಳಿಸಲಿದೆ ಎಂದು ಅವರು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಎಲ್ಲ ಪಕ್ಷದವರನ್ನೂ ಒಳಗೊಂಡ ಸಮಿತಿಯೊಂದನ್ನು ರಚಿಸಲಾಗುವುದು. ಶಾಸಕರು, ವಿಧಾನಪರಿಷತ್ ಸದಸ್ಯರನ್ನು ಒಳಗೊಂಡ ಈ ಸಮಿತಿಯಲ್ಲಿ ವಿವಿಧ ಯೋಗತರಬೇತಿ ಕೇಂದ್ರಗಳ ಮುಖ್ಯಸ್ಥರೂ ಸದಸ್ಯರಾಗಿರುತ್ತಾರೆ. ಒಟ್ಟಾರೆ, ಕಾರ್ಯಕ್ರಮದ ಕುರಿತು ಇಲ್ಲಿ ನಿರ್ಧರಿಸಲಾಗುವುದು ಎಂದರು.

ವಿಧಾನ ಪರಿಷತ್ ಚುನಾವಣೆ: ಜೆಡಿಎಸ್‌ ಅಭ್ಯರ್ಥಿಯಾಗಿ ಟಿ.ಎ ಶರವಣ ನಾಮಪತ್ರ ಸಲ್ಲಿಕೆ – Vishwanews24

Leave a Reply