ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ – vishwanews24

Featured, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ವೆನ್‍ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ವೆನ್‍ಲಾಕ್ ಆಸ್ಪತ್ರೆಯನ್ನು ಮತ್ತಷ್ಟು ಉನ್ನತೀಕರಿಸುವ ಉದ್ದೇಶದಿಂದ ಹೊರರೋಗಿ ವಿಭಾಗದ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರಕಾರ 70 ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದರು.

ಶುಕ್ರವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ವೆನ್‍ಲಾಕ್ ಆಸ್ಪತ್ರೆ ಪ್ರಸ್ತುತ 905 ಹಾಸಿಗೆಗಳ ಸಾಮಥ್ರ್ಯದೊಂದಿಗೆ ಎಲ್ಲ ಪ್ರಮುಖ ತಜ್ಞ ವೈದ್ಯಕೀಯ ಸೇವೆಗಳು ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿದೆ. ಖಾಸಗಿ ಸಹಭಾಗಿತ್ವದಡಿ ಕೆಎಂಸಿ ವೈದ್ಯಕೀಯ ಕಾಲೇಜು ಆಸ್ಪತ್ರೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಸೂಪರ್ ಸ್ಪೆಷಾಲಿಟಿ ಸೇವೆಗಳನ್ನೂ ನೀಡಲಾಗುತ್ತಿದೆ ಎಂದರು.

ಇದನ್ನೂ ಓದಿ :

ಡೇವಿಡ್ ಡಿಸೋಜ ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಬಂಧನ – vishwanews24

ಹೊರರೋಗಿ ವಿಭಾಗದ ಕಟ್ಟಡ ನಿರ್ಮಾಣಕ್ಕೆ ಮಂಜೂರಾಗಿರುವ 70 ಕೋಟಿ ರೂ. ಪೈಕಿ ಮೊದಲ ಹಂತದಲ್ಲಿ 35 ಕೋಟಿ ರೂ. ವೆಚ್ಚದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಯು.ಟಿ.ಖಾದರ್ ಹೇಳಿದರು.

ಇದೇ ವೇಳೆ ಸಿಸಿಬಿ ಬ್ಲಾಕ್ ಕಟ್ಟಡದ ನಿರ್ಮಾಣ ಕಾಮಗಾರಿಯೂ ಪ್ರಗತಿಯಲ್ಲಿದೆ. ಈ ಕಟ್ಟಡ ಪೂರ್ಣಗೊಂಡ ಬಳಿಕ ಆಸ್ಪತ್ರೆಯಲ್ಲಿ ಖಾಲಿ ಇರುವ 428 ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಯು.ಟಿ.ಖಾದರ್ ಸ್ಪಷ್ಟಪಡಿಸಿದರು.

ಇದನ್ನೂ ಓದಿ :

ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ಬ್ರೈನ್ ಮ್ಯಾಪಿಂಗ್, ನಾರ್ಕೋ ಪರೀಕ್ಷೆ ಆರಂಭ – vishwanews24

Leave a Reply