ವೈಯಕ್ತಿಕ ಕಾರಣಕ್ಕೆ ಆದ ಕೊಲೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ನೇಹಾ ತಂದೆ ಆಕ್ರೋಶ – Vishwanews24
ವೈಯಕ್ತಿಕ ಕಾರಣಕ್ಕೆ ಆದ ಕೊಲೆ ಎಂದ ಸಿಎಂ : ತನಿಖೆ ದಿಕ್ಕು ತಪ್ಪಿಸಬೇಡಿ ; ನೇಹಾ ತಂದೆ ಆಕ್ರೋಶ
ಹುಬ್ಬಳ್ಳಿ: ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ
ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ ವಿರೋಧ ವ್ಯಕ್ತಪಡಿಸಿದ್ದಾರೆ.
ಇದು ವೈಯಕ್ತಿಕ ಕಾರಣಕ್ಕೆ ಆಗಿರುವ ಕೊಲೆ ಅಲ್ಲ. ನಾನು ಕಾರ್ಪೊರೇಟರ್, ನನಗೆ ಹೀಗಾದರೆ ಬೇರೆಯವರ ಕಥೆ ಏನು? ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಕೆ ಹೀಗೆ ಹೇಳಿಕೆ ನೀಡುತ್ತಿದ್ದಾರೆ. ನಮಗೂ ಅವರ ಕುಟುಂಬಕ್ಕೂ ಏನು ಸಂಬಂಧ? ತನಿಖೆ ದಿಕ್ಕು ತಪ್ಪಿಸಬೇಡಿ, ಇದು ವೈಯಕ್ತಿಕ ಕಾರಣಕ್ಕೆ ಆದ ಹತ್ಯೆಯಲ್ಲ ಎಂದು ನೇಹಾ ತಂದೆ ನಿರಂಜನ್ ಹಿರೇಮಠ ಹೇಳಿದರು.
ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆ ; ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸೂಚನೆ : ಮುಖ್ಯಮಂತ್ರಿ – Vishwanews24
