ವ್ಯಾಪಾರಿ ಸಮುದಾಯದ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಪ್ರಧಾನಿ ಮೋದಿ -Vishwanews24

Featured, ರಾಷ್ಟ್ರ ನ್ಯೂಸ್

ವ್ಯಾಪಾರಿ ಸಮುದಾಯದ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಪ್ರಧಾನಿ ಮೋದಿ -Vishwanews24

ನವದೆಹಲಿ: ವ್ಯಾಪಾರಿ ಸಮುದಾಯದ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯವನ್ನು ಕೂಡ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಪ್ರಮಾಣದ (ಎಂಎಸ್‌ಎಂಇ) ಉದ್ಯಮದ ವ್ಯಾಪ್ತಿಗೆ ತರಲಾಗಿದೆ. ಇದು ವ್ಯಾಪಾರಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರವಾಗಿದೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.

ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯವನ್ನು ಎಂಎಸ್‌ಎಂಇ ಉದ್ಯಮದ ವ್ಯಾಪ್ತಿಗೆ ತರಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಘೋಷಿಸಿದ್ದರು. ಇದರಿಂದಾಗಿ ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯದವರಿಗೆ ಕೂಡ ಆರ್‌ಬಿಐ ಮಾರ್ಗಸೂಚಿ ಅನ್ವಯ ಆದ್ಯತೆಯ ಮೇರೆಗೆ ಸಾಲ ಲಭ್ಯವಾಗಲಿದೆ.

ಈ ಕುರಿತು ಟ್ವೀಟ್ ಮಾಡಿರುವ ಮೋದಿ, ‘ನಮ್ಮ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರಿಂದ ಕೋಟ್ಯಂತರ ವ್ಯಾಪಾರಿಗಳಿಗೆ ಹಣಕಾಸು ಸೌಲಭ್ಯ ಪಡೆಯುವುದು ಸುಲಭವಾಗಲಿದೆ. ಅನೇಕ ಪ್ರಯೋಜನಗಳನ್ನು ಪಡೆಯುವ ಮೂಲಕ ವ್ಯವಹಾರ ಹೆಚ್ಚಿಸಲು ನೆರವಾಗಲಿದೆ. ವ್ಯಾಪಾರಸ್ಥರ ಸಬಲೀಕರಣಕ್ಕೆ ನಾವು ಬದ್ಧರಾಗಿದ್ದೇವೆ’ ಎಂದು ಉಲ್ಲೇಖಿಸಿದ್ದಾರೆ.