ಶಾಸಕ ಜಮೀರ್ ಅಹ್ಮದ್ ಅವರಿಗೆ ಕೊರೋನಾ ಪಾಸಿಟಿವ್ : ಆಸ್ಪತ್ರೆಗೆ ದಾಖಲು -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಚಾಮರಾಜ ಪೇಟೆಯ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಶಾಸಕ ಜಮೀರ್ ಅಹ್ಮದ್ ಖಾನ್ ಅವರು, ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ.

ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.