ಶಿಗ್ಗಾಂವಿ : ಕ್ಷೇತ್ರದ ಜನರಿಗೆ ಒಳಿತು ಆಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ : ಭರತ್ ಬೊಮ್ಮಾಯಿ – vishwanews24
ಹಣದ ಹೊಳೆಯನ್ನೇ ಹರಿಸಿ ಕಾಂಗ್ರೆಸ್ ಗೆದ್ದಿದೆ : ಭರತ್ ಬೊಮ್ಮಾಯಿ
ಹಾವೇರಿ: ಕಾಂಗ್ರೆಸ್ ಸರ್ಕಾರ ಹಣದ ಹೊಳೆಯನ್ನೇ ಹರಿಸಿದೆ ಎಂದು ಶಿಗ್ಗಾಂವಿ ಪರಾಜಿತ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ಇಡೀ ಸರ್ಕಾರ ಬಂದು ಹಣದ ಹೊಳೆಯನ್ನೇ ಹರಿಸಿದೆ. ಹಾಗಾಗಿ ಇಂದು ಕಾಂಗ್ರೆಸ್ ಗೆದ್ದಿದೆ. ನಾನು ಯಾವತ್ತಿದ್ದರೂ ಶಿಗ್ಗಾಂವಿ ಸವಣೂರು ಕ್ಷೇತ್ರದ ಜನರಿಗೆ ಒಳಿತು ಆಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕ್ಷೇತ್ರದ ಜನರ ಜೊತೆಗೆ ಎಂದೆಂದಿಗೂ ಇರುತ್ತೇನೆ ಎಂದು ಭರವಸೆ ನೀಡಿದರು.
ನಮ್ಮ ಸೋಲಿಗೆ ಕಾರಣ ಏನೆಂಬುವುದನ್ನು ಪಕ್ಷದ ಹಿರಿಯರು ಹಾಗೂ ಯುವಕರೆಲ್ಲ ಸೇರಿ ಅವಲೋಕನ ಮಾಡುತ್ತೇವೆ. ಈ ಬಗ್ಗೆ ಎಲ್ಲರೂ ಒಟ್ಟು ಸೇರಿ ಚರ್ಚಿಸುತ್ತೇವೆ ಎಂದರು.
ಇದು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಗೆಲುವು , ಜನ ಬೆಂಬಲಕ್ಕೆ ಕೃತಜ್ಞತೆ : ಡಿ.ಕೆ.ಶಿವಕುಮಾರ್ – vishwanews24
