ಶಿರಸಿ: ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ರಾಜೀನಾಮೆ – Vishwanews24

Featured, ರಾಜ್ಯ ನ್ಯೂಸ್

ಶಿರಸಿ: ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ರಾಜೀನಾಮೆ

ಶಿರಸಿ: ಕಾಂಗ್ರೆಸ್‌ ಸೇರ್ಪಡೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರೆನ್ನಲಾದ ಕೂಡ್ಲಿಗಿಯ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಶಿರಸಿಯಲ್ಲಿ ಶುಕ್ರವಾರ ರಾಜೀನಾಮೆ ಸಲ್ಲಿಸಿದರು.

ಶಿರಸಿಯ ಕಚೇರಿಗೆ ಆಗಮಿಸಿದ್ದ ಶಾಸಕ ಗೋಪಾಲಕೃಷ್ಣ ಕಾಗೇರಿ ಅವರ ಬಳಿ ಉಭಯಕುಶಲೋಪರಿ ಮಾತನಾಡಿ, ನಂತರ ರಾಜೀನಾಮೆ ಪತ್ರ ಸಲ್ಲಿಸಿದರು. ಗೋಪಾಲಕೃಷ್ಣ ಅವರು ಮೂಲತಃ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

ಉಡುಪಿ: ಉಚಿತ ಪೊಳ್ಳು ಭಾಗ್ಯಗಳ ಆಮಿಷ ಒಡ್ಡಿರುವ ಭ್ರಷ್ಟ ಕಾಂಗ್ರೆಸ್ಸಿಗೆ ಸೋಲು ಖಚಿತ : ಕುಯಿಲಾಡಿ ಸುರೇಶ್ – Vishwanews24

ಗೋಪಾಲಕೃಷ್ಣ ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಬಿಜೆಪಿ ಪಕ್ಷ ಸೇರ್ಪಡೆಯಾಗಿ ಅಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು.

Leave a Reply